Wednesday, August 19, 2026
Google search engine
Homeಅಪರಾಧಕೂಲಿ ಮಾಡುತ್ತಿದ್ದ ವ್ಯಕ್ತಿಯಿಂದ 200 ಕೋಟಿ ರೂ. ವಂಚನೆ: ಮನೆಯಲ್ಲೇ ಬಾರ್, ವಿದೇಶಿ ಯುವತಿಯರು!

ಕೂಲಿ ಮಾಡುತ್ತಿದ್ದ ವ್ಯಕ್ತಿಯಿಂದ 200 ಕೋಟಿ ರೂ. ವಂಚನೆ: ಮನೆಯಲ್ಲೇ ಬಾರ್, ವಿದೇಶಿ ಯುವತಿಯರು!

ಕೆಲವೇ ವರ್ಷಗಳ ಹಿಂದೆ ನಯಾ ಪೈಸೆ ಜೇಬಿನಲ್ಲಿ ಇಲ್ಲದೇ ಕೂಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ 200 ಐಷಾರಾಮಿ ಜೀವನ ನಡೆಸುತ್ತಿದ್ದ ಮಹಾನ್ ವಂಚಕನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನೇತೃತ್ವದಲ್ಲಿ ಪೊಲೀಸರು ಗುರುವಾರ ತಡರಾತ್ರಿ ದಾಳಿ ನಡೆಸಿದಾಗ ಕೋಟ್ಯಂತರ ರೂಪಾಯಿ ವಂಚಿಸಿ ಐಷಾರಾಮಿ ಜೀವನ ನಡೆಸುತ್ತಿದ್ದ ಕಿಂಗ್ ಪಿನ್ ರೊನಾಲ್ಡ್ ಸಲ್ದಾನಾ ಬಂಗಲೆಯನ್ನು ನೋಡಿ ಶಾಕ್ ಆಗಿದ್ದಾರೆ.

2016ರ ವೇಳೆ ನಯಾ ಪೈಸೆ ಕಾಲಿಲ್ಲದೇ ಕೂಲಿ ಕೆಲಸ ಮಾಡಿಕೊಂಡಿದ್ದ ಸಾಲ್ಡಾನಾ, ನಂತರ ವಂಚನಾ ಜಾಲ ಆರಂಭಿಸಿದ್ದು, ಹಲವಾರು ಏಜೆಂಟ್ ಗಳನ್ನು ಹೊಂದಿದ್ದ. ತಾನೊಬ್ಬ ಶ್ರೀಮಂತ ಎಂದು ಬಿಂಬಿಸಿಕೊಂಡು ವಂಚಿಸುತ್ತಿದ್ದ. ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಇನ್ನಷ್ಟು ಮಾಹಿತಿ ಸಂಗ್ರಹಿಸುವ ಸಾಧ್ಯತೆ ಇದೆ.

ಉದ್ಯಮಿಗಳಿಗೆ ನೂರಾರು ಕೋಟಿ ಸಾಲ ಕೊಡಿಸುವುದಾಗಿ ನಂಬಿಸಿ ವಂಚಿಸುತ್ತಿದ್ದ ರೊನಾಲ್ಡ್ ಸಲ್ದಾನಾ ವಾಸಿಸುತ್ತಿದ್ದ ಮಂಗಳೂರಿನ ಜಪ್ಪಿನಮೊಗರು ಮನೆಯಲ್ಲಿ ಚಿನ್ನ ಲೇಪಿತ ಸೋಫಾ, ಚಿನ್ನ, ವಿದೇಶಿ ಮದ್ಯಗಳು, ಮಲೇಷಿಯಾದ ಹುಡುಗಿಯರು, ಬಾರ್ ಪತ್ತೆಯಾಗಿದ್ದು, ಹೆಂಡತಿ ಹಾಗೂ ಮಗುವಿನೊಂದಿಗೆ ಚೆನ್ನೈನಲ್ಲಿ ವಾಸವಾಗಿದ್ದು, ಹೆಂಡತಿಯ ಹೆಸರಿನಲ್ಲೂ ಹಲವು ಉದ್ಯಮ ನಡೆಸುತ್ತಿದ್ದ ಎನ್ನುವುದು ತಿಳಿದು ಬಂದಿದೆ.

ಆರೋಪಿ ರೊನಾಲ್ಡ್ ಸಲ್ದಾನಾ ತಾನು ಉದ್ಯಮಿಯೆಂದು ಬಿಂಬಿಸಿ ಹೊರರಾಜ್ಯ, ಹೊರಜಿಲ್ಲೆಯಲ್ಲಿರುವ ಐಷಾರಾಮಿ ವ್ಯಕ್ತಿಗಳನ್ನೇ ಟಾರ್ಗೆಟ್ ಮಾಡಿ ಜಾಗದ ವ್ಯವಹಾರ, ಸಾಲ ನೀಡುವ ನೆಪದಲ್ಲಿ ನಂಬಿಕೆ ಗಳಿಸುತ್ತಿದ್ದ. ದೇಶದ ಪ್ರಮುಖ ನಗರಗಳಲ್ಲಿ ವಂಚನೆಗಾಗಿ ಏಜೆಂಟರ್‌ಗಳನ್ನು ಇರಿಸಿಕೊಂಡು ಅವರ ಮೂಲಕ ಡೀಲ್ ಕುದುರಿಸಲು ಮಂಗಳೂರಿನ ಐಷಾರಾಮಿ ಮನೆಗೆ ಕರೆಸುತ್ತಿದ್ದ. ತಾನೊಬ್ಬ ಅಗರ್ಭ ಶ್ರೀಮಂತ ಎಂಬಂತೆ ಪೋಸ್‌ ನೀಡುತ್ತಿದ್ದ.

ಚಿನ್ನ, ವಿದೇಶಿ ಮದ್ಯಗಳು, ಮಲೇಶಿಯನ್ ಹುಡುಗಿಯರು ಎಲ್ಲವನ್ನು ಮನೆಗೆ ಬಂದ ಉದ್ಯಮಿಗಳಿಗೆ ನೀಡುತ್ತಿದ್ದ. ಐಷಾರಾಮಿ ಮನೆ,ನ ಆತಿಥ್ಯ ನೋಡಿಯೇ ಉದ್ಯಮಿಗಳು ಖೆಡ್ಡಾಕ್ಕೆ ಬೀಳುತ್ತಿದ್ದರು. 50 ರಿಂದ 100 ಕೋಟಿ ರೂ. ಅಥವಾ ಅದಕ್ಕಿಂತ ದೊಡ್ಡ ಮೊತ್ತದ ಸಾಲ ನೀಡಲು 5-10 ಕೋಟಿ ರೂ. ಸ್ಟ್ಯಾಂಪ್ ಡ್ಯೂಟಿ ನೀಡುವಂತೆ ಕೇಳುತ್ತಿದ್ದ. ಆತನ ಮಾತಿಗೆ ಮರುಳಾಗಿ ಉದ್ಯಮಿಗಳು ಕೋಟ್ಯಂತರ ರೂ. ನಗದು ರೂಪದಲ್ಲಿ ನೀಡುತ್ತಿದ್ದರು.

ಹಣ ವಸೂಲಿಯಾದ ಬಳಿಕ ನಾನಾ ಕಾರಣ ಹೇಳಿ ಮೊಬೈಲ್ ಸ್ವಿಚ್ಛ್ ಆಫ್ ಮಾಡಿ ಉದ್ಯಮಿಗಳಿಂದ ಎಸ್ಕೇಪ್ ಆಗುತ್ತಿದ್ದ. ಹೀಗೆ ವಂಚನೆಗೊಳಗಾದ ಇಬ್ಬರು ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಏಕಾಏಕಿ ಮನೆಗೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.

ಮೂರು ತಿಂಗಳಲ್ಲೇ 45 ಕೋಟಿ ರೂ. ವಂಚಿಸಿದ್ದು, ಈವರೆಗೂ 200 ಕೋಟಿ ರೂ. ಅಧಿಕ ಹಣ ವಂಚಿಸಿರುವುದು ಪತ್ತೆಯಾಗಿದೆ. ಬಂಗಲೆಯಲ್ಲಿಯೇ ಸೀಕ್ರೆಟ್‌ ಅಡಗು ತಾಣ ಮಾಡಿಕೊಂಡು, ಒಂದು ಕೋಣೆಯಿಂದ ಇನ್ನೊಂದು ಕೋಣೆಗೆ ಲಿಂಕ್ ಮಾಡಿಸಿದ್ದ. ಮನೆಯ ಸುತ್ತ ಸಿಸಿ ಕ್ಯಾಮೆರಾ ಹಾಕಿಸಿಕೊಂಡು ಮೋಸ ಹೋದವರು ಹಣ ಕೇಳಲು ಬಂದರೆ ಸೀಕ್ರೆಟ್ ರೂಮ್‌ಗೆ ಹೋಗಿ ಮನೆಯಲ್ಲಿ ಯಾರೂ ಇಲ್ಲ ಎಂಬಂತೆ ಬಿಂಬಿಸುತ್ತಿದ್ದ.

ಆರೋಪಿಯ ಬ್ಯಾಂಕ್ ಖಾತೆಗಳಲ್ಲಿ 40 ಕೋಟಿ ರೂ. ಪತ್ತೆಯಾಗಿದೆ. ಬೇರೆ ಬೇರೆ ಕಡೆಗಳಲ್ಲಿ ಉದ್ಯಮ ನಡೆಸುತ್ತಿದ್ದು, ಕೋಟ್ಯಂತರ ರೂಪಾಯಿ ಬಂಡವಾಳ ಹಾಕಿದ್ದ. ಹೆಂಡತಿ ಹಾಗೂ ಮಗುವಿನೊಂದಿಗೆ ಚೆನ್ನೈನಲ್ಲಿ ವಾಸವಾಗಿದ್ದು, ಹೆಂಡತಿಯ ಹೆಸರಿನಲ್ಲೂ ಹಲವು ಉದ್ಯಮ ನಡೆಸುತ್ತಿದ್ದ ಎನ್ನುವುದು ತಿಳಿದು ಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments