Monday, June 15, 2026
Google search engine
Homeಜಿಲ್ಲಾ ಸುದ್ದಿಗದಗದಲ್ಲಿ ಭೀಕರ ಅಪಘಾತ: ಮೂವರು ಕೃಷಿ ಕಾರ್ಮಿಕರ ಸಾವು

ಗದಗದಲ್ಲಿ ಭೀಕರ ಅಪಘಾತ: ಮೂವರು ಕೃಷಿ ಕಾರ್ಮಿಕರ ಸಾವು

ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಕೃಷಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ ಸಂಭವಿಸಿದೆ.

ರೋಣ ತಾಲೂಕಿನ ಜಿಗಳೂರು ಗ್ರಾಮದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದ ದುರ್ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಿಯಂಬು ಹುನಗುಂದ (55), ಅನ್ನಪೂರ್ಣ ಚಂಗಳಿ (45) ಹಾಗೂ ಸುಜಾತಾ ಹೊಸಮನಿ (30) ಮೃತಪಟ್ಟಿದ್ದಾರೆ.

ಗಜೇಂದ್ರಗಡದಿಂದ ರೋಣ ಕಡೆಗೆ ತೆರಳುತ್ತಿದ್ದ ಕ್ರೂಸರ್ ಹಾಗೂ ರೋಣದಿಂದ ಗಜೇಂದ್ರಗಡ ಕಡೆಗೆ ಹೊರಟಿದ್ದ ಕ್ಯಾಂಟರ್ ನಡುವೆ ಅಪಘಾತ ಜರುಗಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಕಡಲೆ ಕೀಳುವ ಕೆಲಸಕ್ಕಾಗಿ ತೆರಳುತ್ತಿದ್ದ ಕೃಷಿ ಕಾರ್ಮಿಕರೇ ಈ ದುರ್ಘಟನೆಯಲ್ಲಿ ಬಲಿಯಾಗಿದ್ದು, ಸ್ಥಳೀಯರಲ್ಲಿ ತೀವ್ರ ಶೋಕ ಮೂಡಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕ್ಯಾಂಟರ್ ಚಾಲಕ ಸ್ಥಳದಲ್ಲೇ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ, ರೋಣ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments