Wednesday, 28 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಇಂದಿನಿಂದ ಮನೆ ಮನೆಗೆ ಪೊಲೀಸ್‌‍ ಆರಂಭ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
bengaluru police
bengaluru police

ಬೆಂಗಳೂರು: ಜನಸ್ನೇಹಿ ಪೊಲೀಸ್‌‍ ವ್ಯವಸ್ಥೆಯ ಭಾಗವಾಗಿ `ಮನೆ ಮನೆಗೆ ಪೊಲೀಸ್‌‍’ಎಂಬ ವಿನೂತನ ಕಾರ್ಯಕ್ರಮವು ಇಂದಿನಿಂದ ಆರಂಭಗೊಳ್ಳಲಿದೆ.

ಮನೆ ಮನೆಗೆ ಪೊಲೀಸ್‌‍’ ಕಾರ್ಯಕ್ರಮವನ್ನು ಬೆಳಗ್ಗೆ 10.30 ಕ್ಕೆ ಗೋವಿಂದರಾಜನಗರ ವಾರ್ಡ್‌ನ ಎಂ.ಸಿ ಲೇಔಟ್‌ನಲ್ಲಿ ಗೃಹ ಸಚಿವರಾದ ಡಾ.ಜಿ ಪರಮೇಶ್ವರ್‌ ಉದ್ಘಾಟನೆ ಮಾಡಲಿದ್ದಾರೆ. ಡಿಜಿ-ಐಜಿಪಿ, ಡಾ.ಎಂ.ಎ ಸಲೀಂ,ನಗರ ಪೊಲೀಸ್‌‍ ಆಯುಕ್ತರಾದ ಸೀಮಂತ್‌ಕುಮಾರ್‌ ಸಿಂಗ್‌ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

`ಮನೆ ಮನೆಗೆ ಪೊಲೀಸ್‌‍’ ಕಾರ್ಯಕ್ರಮದಲ್ಲಿ ಮಹಿಳಾ ಪೊಲೀಸ್‌‍ ಅಧಿಕಾರಿ ಹಾಗೂ ಸಿಬ್ಬಂದಿಗಳು ಮುಕ್ತವಾಗಿ ಮಹಿಳೆಯರ ಸಮಸ್ಯೆಯನ್ನು ಬೀಟ್‌ಗಳಲ್ಲಿಯೇ ಆಲಿಸಲಿದ್ದಾರೆ. ಮಹಿಳೆ ಮತ್ತು ಮಕ್ಕಳ ಸುರಕ್ಷತೆಯನ್ನು ಖಾತ್ರಿಪಡಿಸಿ ಸುರಕ್ಷಿತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡಲಿದ್ದು, ಕೌಟುಂಬಿಕ ದೌರ್ಜನ್ಯ ವಿರುದ್ಧ ಜಾಗೃತಿ ಮತ್ತು ಕಾನೂನಿನ ಅರಿವು ಮೂಡಿಸಲಿದ್ದಾರೆ.

ಪೊಲೀಸ್‌‍ ಸೇವೆಗಳ ಪ್ರತಿಯೊಂದು ಸ್ತರದಲ್ಲೂ ಸಾರ್ವಜನಿಕರ ಬೆಂಬಲ ಮತ್ತು ಸಹಭಾಗಿತ್ವ ಸಾಧಿಸಿಕೊಳ್ಳುವುದರಿಂದ ಮಾತ್ರವೇ ಉತ್ಕೃಷ್ಟ ಸೇವೆಯನ್ನು ಒದಗಿಸಲು ಸಾಧ್ಯ. ಈ ನಿಟ್ಟಿನಲ್ಲಿ ಈಗಾಗಲೇ ಪ್ರತಿಯೊಂದು ಪೊಲೀಸ್‌‍ ಠಾಣಾ ವ್ಯಾಪ್ತಿಗಳಲ್ಲಿ ಸಬ್‌-ಬೀಟ್‌ಗಳನ್ನಾಗಿ ವಿಂಗಡಿಸಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.

ಇನ್ನು ಮುಂದೆ ಪೊಲೀಸ್‌‍ ಅಧಿಕಾರಿ ಮತ್ತು ಸಿಬ್ಬಂದಿಗಳು ಮನೆ ಮನೆಗೂ ಭೇಟಿ ನೀಡಿ ಸಾರ್ವಜನಿಕರ ದೂರುಗಳನ್ನು ಆಲಿಸಿ, ಕಾನೂನಿನ ಚೌಕಟ್ಟಿನಲ್ಲಿ ಪರಿಹಾರ ಕಲ್ಪಿಸಲು ಪ್ರಯತ್ನಿಸಲಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment