Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ಬೆಂಗಳೂರು

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ವಿಭು ಭಕ್ತು ಪ್ರಮಾಣ ವಚನ ಸ್ವೀಕಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 2 ವೀಕ್ಷಣೆಗಳು
Justice Vibhu Bakhru

ಬೆಂಗಳೂರು: ನ್ಯಾಯಮೂರ್ತಿ ವಿಭು ಭಕ್ರು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ಶನಿವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಭಕ್ತು ಪ್ರಮಾಣ ವಚನ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್, ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು.

ನ್ಯಾಯಮೂರ್ತಿ ಭಕ್ರು 1966ರಲ್ಲಿ ನಾಗ್ಪುರದಲ್ಲಿ ಜನಿಸಿದ್ದು, ದೆಹಲಿಯ ಮಥುರಾ ರಸ್ತೆಯಲ್ಲಿರುವ ದೆಹಲಿ ಪಬ್ಲಿಕ್ ಶಾಲೆಯಲ್ಲಿ ಶಿಕ್ಷಣ ಪಡೆದಿದ್ದಾರೆ. 1987ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದಿದ್ದಾರೆ. 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿಯೂ ಅರ್ಹತೆ ಪಡೆದಿದ್ದರು.

1990ರಲ್ಲಿ ಎಲ್‍ಎಲ್‍ಬಿ ಪದವಿ ಪಡೆದು, ಅದೇ ವರ್ಷ ದೆಹಲಿ ವಕೀಲರ ಪರಿಷತ್‍ನಲ್ಲಿ ವಕೀಲರಾಗಿ ನೋಂದಣಿ ಮಾಡಿಸಿದ್ದರು. ಅವರು ವಕೀಲರಾಗಿದ್ದ ಅವಧಿಯಲ್ಲಿ ಸುಪ್ರೀಂ ಕೋರ್ಟ್, ದೆಹಲಿ ಹೈಕೋರ್ಟ್, ಕಂಪನಿ ಕಾನೂನು ಮಂಡಳಿ ಮತ್ತು ಇತರೆ ನ್ಯಾಯ ಮಂಡಳಿಗಳಲ್ಲಿ ವಕೀಲಿಕೆ ಮಾಡಿದ್ದಾರೆ. 2011ರಲ್ಲಿ ಹಿರಿಯ ವಕೀಲರಾಗಿ ಅವರು ಪದೋನ್ನತಿ ಪಡೆದಿದ್ದರು. 2013ರ ಏಪ್ರಿಲ್ 17ರಂದು ದೆಹಲಿ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡ ಅವರು 2015ರ ಮಾರ್ಚ್ 18ರಂದು ಖಾಯಂಗೊಂಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment