Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ರಾಜ್ಯ

ಮೆಟ್ರೋ ದರ ಏರಿಕೆ ಹಿಂದೆ ನಮ್ಮ ಪಾತ್ರವಿಲ್ಲ: ಸಿಎಂ ಸ್ಪಷ್ಟನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 2 ವೀಕ್ಷಣೆಗಳು

ಹರಿಹರ: ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದ್ದಾರೆ.

ನಗರದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ಆವರಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,

ಮೆಟ್ರೋ ದರ ಹೆಚ್ಚಳ: ಸರ್ಕಾರದ ಪಾತ್ರವಿಲ್ಲ

ಮೆಟ್ರೋ ದರ ಹೆಚ್ಚಳವಾಗಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಮೆಟ್ರೋ ದರವನ್ನು ಕೇಂದ್ರ ಸರ್ಕಾರದಿಂದ ನೇಮಕವಾಗಿರುವ ಮೆಟ್ರೋ ಅಧ್ಯಕ್ಷರು ನಿಗದಿ ಮಾಡುತ್ತಾರೆ.

ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದರು. ಮೆಟ್ರೋ ದರದ ಬಗ್ಗೆ ಚರ್ಚಿಸಲು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ದೆಹಲಿಗೆ ತೆರಳುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಈ ಬಗ್ಗೆ ಅವರನ್ನೇ ಕೇಳಬೇಕು ಎಂದರು.

ಅಮೆರಿಕಾದ ಒತ್ತಡಕ್ಕೆ ಮಣಿದ ಪ್ರಧಾನಿ

ಭಾರತ ಮತ್ತು ಅಮೆರಿಕ ನಡುವೆ ಆಗಿರುವ ಒಪ್ಪಂದದಿಂದ ರೈತರಿಗೆ ಅನ್ಯಾಯವಾಗುತ್ತದೆ. ಪ್ರಧಾನ ಮಂತ್ರಿಗಳು ಅಮೆರಿಕಾದ ಒತ್ತಡಕ್ಕೆ ಮಣಿದಿದ್ದಾರೆ ಎಂದರು.

ವಾಲ್ಮೀಕಿ ಜನಾಂಗದವರಿಗೆ ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇರುವ ಬಗ್ಗೆ ಪ್ರತಿಕ್ರಿಯೆ ನೀಡಿ ನಾವು  ಸಚಿವರನ್ನು  ತೆಗೆದುಹಾಕಿಲ್ಲ. ಕಾರಣಾಂತರದಿಂದ ರಾಜೀನಾಮೆ ಕೊಡುವ ಪರಿಸ್ಥಿತಿ ಬಂತು. ಸಚಿವ ಸಂಪುಟ ವಿಸ್ತರಣೆ ಮಾಡುವಾಗ ಪರಿಗಣಿಸಲಾಗುವುದು ಎಂದರು.

ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರು ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಅವರು ರಾಜಿನಾಮೆ ಸಲ್ಲಿಸಿದ್ದಾರೆ ಎನ್ನುವುದು ಸತ್ಯಕ್ಕೆ ದೂರವಾದ ಸಂಗತಿ ಎಂದರು.

ಬಜೆಟ್ ಮಂಡನೆ ದಿನಾಂಕ ; ಶೀಘ್ರ ಘೋಷಣೆ

ರಾಜ್ಯ ಬಜೆಟ್ ಗೆ ಸಂಬಂಧಿಸಿದಂತೆ ತಯಾರಿ  ನಡೆಯುತ್ತಿದ್ದು, ಬಜೆಟ್ ಮಂಡಿಸುವ ದಿನಾಂಕವನ್ನು  ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment