Thursday, May 14, 2026
Google search engine
Homeದೇಶಆಪರೇಷನ್ ಸಿಂಧೂರ್ ಗೆ 100 ಉಗ್ರರು ಬಲಿ: ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್ ವಿವರ

ಆಪರೇಷನ್ ಸಿಂಧೂರ್ ಗೆ 100 ಉಗ್ರರು ಬಲಿ: ಸರ್ವಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್ ವಿವರ

ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪೆಹಲ್ಗಾಮ್ ದಾಳಿಗೆ ತಕ್ಕ ಪ್ರತ್ಯುತ್ತರ ನೀಡಲಾಗಿದ್ದು, 100 ಉಗ್ರರನ್ನು ಹತ್ಯೆಗೈಯ್ಯಲಾಗಿದೆ ಎಂದು ಸರ್ವಪಕ್ಷ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಪ್ರಧಾನಿ ಮೋದಿ ಗೈರು ಹಾಜರಿ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜನಾಥ್ ಸಿಂಗ್, ಕಾರ್ಯಾಚರಣೆಯ ವಿವರಗಳನ್ನು ಸರ್ವಪಕ್ಷ ಸದಸ್ಯರಿಗೆ ನೀಡಿದೆ.

ಈ ವೇಳೆ ದಾಳಿಯ ನಂತರ ಪಾಕಿಸ್ತಾನದಿಂದ ಪ್ರತಿಕ್ರಿಯೆ ನಿರೀಕ್ಷಿಸಲಾಗಿದ್ದು, ಅತ್ಯಂತ ಮಹತ್ವದ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಭಾರತೀಯ ಸೇನೆಯ ದಾಳಿಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಎಲ್ಲಾ ಪಕ್ಷಗಳ ಸದಸ್ಯರು ಒಕ್ಕೊರಲಿನಿಂದ ಭಾರತೀಯ ಸೇನೆಯ ನಿಖರ ದಾಳಿಗೆ ಪ್ರಶಂಸೆ ವ್ಯಕ್ತಪಡಿಸಿದರು.

ಉಗ್ರರ ವಿರುದ್ಧ ಕೇಂದ್ರ ಸರ್ಕಾರ ಹಾಗೂ ಭಾರತೀಯ ಸೇನೆ ಯಾವುದೇ ಕ್ರಮ ಕೈಗೊಂಡರೂ ನಮ್ಮ ಬೆಂಬಲವಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments