Thursday, May 14, 2026
Google search engine
Homeದೇಶನದಿಗೆ ಬೊಲೆರೊ ಕಾರು ಬಿದ್ದು ದೇವಸ್ಥಾನಕ್ಕೆ ತೆರಳುತ್ತಿದ್ದ 11 ಮಂದಿ ದುರ್ಮರಣ: 5 ಲಕ್ಷ ರೂ....

ನದಿಗೆ ಬೊಲೆರೊ ಕಾರು ಬಿದ್ದು ದೇವಸ್ಥಾನಕ್ಕೆ ತೆರಳುತ್ತಿದ್ದ 11 ಮಂದಿ ದುರ್ಮರಣ: 5 ಲಕ್ಷ ರೂ. ಪರಿಹಾರ ಮೊತ್ತ ಘೋಷಣೆ

ಖರ್ಗುಪುರದ ಪೃಥ್ವಿನಾಥ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಬೊಲೆರೊ ಕಾರು ಸರಯೂ ನದಿಗೆ ಬಿದ್ದು 11 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ.

ಉತ್ತರ ಪ್ರದೇಶದ ಗೊಂಡಾಯಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ನಾಲ್ವರು ಗಾಯಗೊಂಡಿದ್ದಾರೆ.

ಸಿಹಗಾಂವ್‌ನಿಂದ ಖರ್ಗುಪುರದ ಪೃಥ್ವಿನಾಥ ದೇವಸ್ಥಾನದಲ್ಲಿ ತೆರಳಿ ಪವಿತ್ರ ನೀರು ಅರ್ಪಿಸಿ ಪ್ರಾರ್ಥನೆ ಸಲ್ಲಿಸಲು ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ನದಿಗೆ ಬಿದ್ದಿದೆ.

ಬೊಲೆರೊ 6 ಆಸನಗಳ ಕಾರಿನಲ್ಲಿ 15 ಮಂದಿ ಪ್ರಯಾಣಿಸುತ್ತಿದ್ದು, ಕಾರು ನದಿಗೆ ಬೀಳುತ್ತಿದ್ದಂತೆ ಗ್ರಾಮಸ್ಥರು ಕೂಡಲೇ ಪೊಲೀಸರಿಗೆ ಕರೆ ಮಾಡಿ ವಿಷಯ ಮುಟ್ಟಿಸಿದ್ದಾರೆ. ಆನಂತರ ಗ್ರಾಮಸ್ಥರು ಮತ್ತು ರಕ್ಷಣಾ ತಂಡದ ಸಹಾಯದಿಂದ 11 ಮೃತದೇಹಗಳನ್ನ ಹೊರತೆಗೆದಿದ್ದಾರೆ.

ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗೆ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಘಟನೆಯ ತನಿಖೆ ಪ್ರಾರಂಭವಾಗಿದೆ.

5 ಲಕ್ಷ ರೂ. ಪರಿಹಾರ ಘೋಷಣೆ

ಘಟನೆ ಕುರಿಯು ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಪ್ರಧಾನಿ ಮೋದಿ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದರೆ, ಸಿಎಂ ಯೋಗಿ ಆದಿತ್ಯನಾಥ್‌ ತಲಾ ೫ ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments