ಕೇರಳದಲ್ಲಿ ಮುಂಗಾರು ಪ್ರವೇಶಕ್ಕೆ ಮುನ್ನವೇ ಭಾರೀ ಮಳೆಯಾಗುತ್ತಿದ್ದು, ರಾಜ್ಯದಲ್ಲಿ ವಿವಿದೆಡೆ ಮಳೆಯಿಂದ 11 ಮಂದಿ ಮೃತಪಟ್ಟಿದ್ದಾರೆ.
ಹವಾಮಾನ ಇಲಾಖೆ 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ತಿರುವನಂತಪುರಂ, ಕೊಲ್ಲಂ, ಅಲ್ಲಪುಜಾ, ಎರ್ನಾಕುಲಂ, ಕೋಜಿಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಮೇ 9ರಿಂದ ಇಲ್ಲಿಯವರೆಗೆ ಮಳೆಯಿಂದ 11 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 6 ಮಂದಿ ನೀರಿನಲ್ಲಿ ಮುಳುಗಿ ಸತ್ತರೆ, ಇಬ್ಬರು ಕಾಮಗಾರಿ ವೇಳೆ, ಇಬ್ಬರು ಸಿಡಿಲು ಬಡಿದು ಹಾಗೂ ಒಂದು ಮನೆ ಗೋಡೆ ಕುಸಿದು ಸಾವು ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರದ ನಂತರ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಬಹುದು. ಮೇ 31ರಿಂದ ಮುಂಗಾರು ಪ್ರವೇಶಿಸಲಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.