ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ 6 ಗಂಟೆಗಳ ಕಾರ್ಯಾಚರಣೆಯಲ್ಲಿ 12 ನಕ್ಸಲರನ್ನು ಹತ್ಯೆಗೈದಿದ್ದು, ಹಲವಾರು ಆಟೋಮೆಟಿಕ್ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
ಛತ್ತೀಸಗಢಕ್ಕೆ ಹೊಂದಿಕೊಂಡಿರುವ ಗಡಿಗೆ ಹೊಂದಿಕೊಂಡಿರುವ ವಂಡೋಲಿ ಗ್ರಾಮದಲ್ಲಿ 15 ನಕ್ಸಲರು ಬೀಡುಬಿಟ್ಟಿದ್ದಾರೆ ಎಂಬ ಗುಪ್ತಚರ ಮಾಹಿತಿ ಆಧರಿಸಿ ಬುಧವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು.
ಡೆಪ್ಯುಟಿ ಸೂಪರಿಟೆಂಡೆಂಟ್ ಆಫ್ ಪೊಲೀಸ್ ನೇತೃತ್ವದಲ್ಲಿ 7 ಸಿ-60 ತುಕಡಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಮಧ್ಯಾಹ್ನ ಘಟನಾ ಸ್ಥಳಕ್ಕೆ ತಲುಪಿದಾಗ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಅಧಿಕಾರಿಗಳು ಘಟನೆಯನ್ನು ವಿವರಿಸಿದ್ದಾರೆ.
ಗುಂಡಿನ ಚಕಮಕಿ ವೇಳೆ ಒಬ್ಬ ಸಬ್ ಇನ್ ಸ್ಪೆಕ್ಟರ್ ಮತ್ತು ಯೋಧ ಗುಂಡು ತಗುಲಿ ಗಾಯಗೊಂಡಿದ್ದು, ಚಿಕಿತ್ಸೆ ನಂತರ ಚೇತರಿಸಿಕೊಳ್ಳುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ನಾಗ್ಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ದಾಳಿಯ ವೇಳೆ 3 ಎಕೆ-47 ರೈಫಲ್ಸ್, 2 ಐಎನ್ ಎಸ್ ಎಎಸ್, 1 ಕಾರ್ಬೆನ್, ಎಸ್ ಎಲ್ ಆರ್ ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ 12 ನಕ್ಸಲರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ನಕ್ಸಲರ ಗುರುತು ಪತ್ತೆಯಾಗಿಲ್ಲ.