Friday, May 15, 2026
Google search engine
Homeದೇಶಕೋಲ್ಕತಾ ಹೋಟೆಲ್ ನಲ್ಲಿ ಅಗ್ನಿ ದುರಂತಕ್ಕೆ 14 ಮಂದಿ ಬಲಿ: ತನಿಖೆಗೆ ಆದೇಶ

ಕೋಲ್ಕತಾ ಹೋಟೆಲ್ ನಲ್ಲಿ ಅಗ್ನಿ ದುರಂತಕ್ಕೆ 14 ಮಂದಿ ಬಲಿ: ತನಿಖೆಗೆ ಆದೇಶ

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ಹೋಟೆಲ್ ನಲ್ಲಿ  ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದಾರೆ.

ಸೆಂಟ್ರಲ್ ಕೋಲ್ಕತಾದ ರಿತುರಾಜ್ ಹೋಟೆಲ್ ನಲ್ಲಿ ಮಂಗಳವಾರ ರಾತ್ರಿ 8.,15ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, 14 ಮಂದಿ ಶವ ಹೊರಗೆ ತೆಗೆಯಲಾಗಿದ್ದು, ಹಲವಾರು ಮಂದಿಯನ್ನು ರಕ್ಷಿಸಲಾಗಿದೆ.

ಅಗ್ನಿ ದುರಂತಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಘಟನೆಯ ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ ಎಂದು ಕೋಲ್ಕತಾ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ವರ್ಮಾ ತಿಳಿಸಿದ್ದಾರೆ.

ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸುಕಂತಾ ಮಂಜುಂದಾರ್, ಕೋಲ್ಕತಾದಲ್ಲಿ ಹೋಟೆಲ್ ಗಳ ಸುರಕ್ಷತಾ ಮಾರ್ಗಸೂಚಿ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments