Thursday, May 14, 2026
Google search engine
Homeದೇಶಆಪರೇಷನ್ ಸಿಂಧೂರ್ ಬೆನ್ನಲ್ಲೇ ಪಾಕಿಸ್ತಾನ ಬಾಂಬ್ ದಾಳಿ: 15 ಸಾವು, 40 ಮಂದಿಗೆ ಗಾಯ

ಆಪರೇಷನ್ ಸಿಂಧೂರ್ ಬೆನ್ನಲ್ಲೇ ಪಾಕಿಸ್ತಾನ ಬಾಂಬ್ ದಾಳಿ: 15 ಸಾವು, 40 ಮಂದಿಗೆ ಗಾಯ

ಭಾರತ ದಿಢೀರನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ಪಾಕಿಸ್ತಾನ ಸೇನೆ ಜಮ್ಮು ಕಾಶ್ಮೀರ ಗಡಿಯಲ್ಲಿ ಬಾಂಬ್ ದಾಳಿ ನಡೆಸಿದ್ದು, 15 ಮಂದಿ ನಾಗರಿಕರು ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಪೆಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಪ್ರತಿಕಾರವಾಗಿ ಭಾರತ ಸೇನೆ ಪಾಕಿಸ್ತಾನದ ಮೇಲೆ ವಾಯುದಾಳಿ ನಡೆಸಿ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದ ಬೆನ್ನಲ್ಲೇ ಪಾಕಿಸ್ತಾನ ಸೇನೆ ಅಂತಾರಾಷ್ಟ್ರೀಯ ಗಡಿಯಲ್ಲಿ ಭಾರೀ ಪ್ರಮಾಣದಲ್ಲಿ ಬಾಂಬ್ ದಾಳಿ ನಡೆಸಿದೆ. ದಾಳಿಯಲ್ಲಿ ಹಲವಾರು ಮನೆಗಳು ಹಾನಿಗೊಳಗಾಗಿವೆ.

ಕುಪ್ವಾರಾ ಮತ್ತು ರಜೌರಿ ಜಿಲ್ಲೆಗಳಲ್ಲಿ ಮೂವರು ಗೂರ್ಖಾಗಳು ಸೇರಿದಂತೆ 10 ಮಂದಿ ನಾಗರಿಕರು ಅಸುನೀಗಿದ್ದಾರೆ ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments