ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾವನ್ನು ಔರಾದ್ ನಲ್ಲಿ ವಶಕ್ಕೆ ಪಡೆಯಲಾಗಿದ್ದು, ಇದು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಗಾಂಜಾ ಬೇಟೆಯಾಗಿದೆ.
ಕ್ರೈಂ ಬ್ಯೂರೋ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಒಡಿಶಾದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾವನ್ನು ಔರಾದ್ ತಾಲೂಕಿನ ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ ಪೊಲೀಸರು ಜಪ್ತಿ ಮಾಡಿದ್ದಾರೆ.
ಕೆಎ–38, 5510 ಸಂಖ್ಯೆಯ ಲಾರಿಯ ಮೇಲ್ಭಾಗದಲ್ಲಿ ಸಿಮೆಂಟ್ ಬ್ಲಾಕ್ ಗಳನ್ನು ತುಂಬಿ ಕೆಳಗೆ ಯಾರಿಗೂ ತಿಳಿಯದಂತೆ ಗಾಂಜಾವನ್ನು ಚೀಲಗಳಿಗೆ ತುಂಬಿ ಅಡಗಿಸಿಟ್ಟು ಸಾಗಿಸಲಾಗುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ಔರಾದ್ ತಾಲೂಕಿನ ವನಮಾರಪ್ಪಳ್ಳಿ ಚೆಕ್ ಪೊಸ್ಟ್ ಬಳಿ ಅಧಿಕಾರಿಗಳು ದಾಳಿ ನಡೆಸಿದ್ದು, ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.9 ರಂದು ಸಹ ವನಮಾರಪ್ಪಳ್ಳಿ ಚೆಕ್ ಪೋಸ್ಟ್ನಲ್ಲಿ 15 ಕೋಟಿ 50 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ.