ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ 18 ಕಾರ್ಮಿಕರು ಮೃತಪಟ್ಟ ಘಟನೆ ಮೇಘಾಲಯದ ತಾಷ್ಕನಿಯಲ್ಲಿ ನಡೆದಿದೆ.
ಮೈನ್ಸಿಘಟ್ ನಲ್ಲಿರುವ ಅಕ್ರಮ ಗಣಿಗಾರಿಕೆಯ ಒಳಗಡೆ ಸ್ಫೋಟ ಸಂಭವಿಸಿದ್ದು, ಭಾರೀ ಪ್ರಮಾಣದಲ್ಲಿ ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಅಕ್ರಮ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಕೆಲಸ ಮಾಡುತ್ತಿದ್ದ ಬಹುತೇಕ ಕಾರ್ಮಿಕರು ಅಸ್ಸಾಂ ನಿವಾಸಿಗಳಾಗಿದ್ದು, ಸ್ಥಳೀಯ ಪೊಲೀಸರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮೃತ ಕುಟುಂಬಗಳಿಗೆ ಪರಿಹಾರ ಮೊತ್ತ ಘೋಷಿಸಿದ್ದಾರೆ.



