Kannadavahini

ಬಾರಿಸು ಕನ್ನಡ ಡಿಂಡಿಮವ

Month: March 2024

IPL 2024: ಮೋಹಿತ್ ದಾಳಿಗೆ ಮುಗ್ಗರಿಸಿದ ಹೈದರಾಬಾದ್, ಗುಜರಾತ್ ಗೆ 7 ವಿಕೆಟ್ ಜಯ!

ಮಧ್ಯಮ ವೇಗಿ ಮೋಹಿತ್ ಶರ್ಮ ಮಾರಕ ದಾಳಿ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 7 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಮೊದು ಬ್ಯಾಟ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 168…

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಜೆಡಿಎಸ್ ಗೆ ಶಾಕ್: ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ?

ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ದೊಡ್ಡ ಆಘಾತ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಅತ್ಯಂತ ಪ್ರಬಲ ಜೆಡಿಎಸ್ ಮುಖಂಡ ಹಾಗೂ ಪ್ರಾಮಾಣಿಕ ಶಾಸಕ ಎಂದು ಹೆಸರು ಗಳಿಸಿರುವ ಕೆಪಿ ಬಚ್ಚೇಗೌಡ ಜೆಡಿಎಸ್ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಸ್ಥಳೀಯ ಸಮಸ್ಯೆಗಳಿಗೆ ಜೆಡಿಎಸ್…

400 ಸ್ಥಾನ ಗೆಲ್ಲಲು ಮ್ಯಾಚ್ ಫಿಕ್ಸಿಂಗ್ ಗಾಗಿ ಅಂಪೈರ್ ನೇಮಿಸಿರುವ ಬಿಜೆಪಿ: ರಾಹುಲ್ ಗಾಂಧಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ 400ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಮಾಡಿದ್ದು, ಇದಕ್ಕಾಗಿ ಅಂಪೈರ್ ಗಳನ್ನು ನೇಮಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಲೋಕತಂತ್ರ ಬಚಾವೊ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮ್ಯಾಚ್ ಫಿಕ್ಸಿಂಗ್ ಆಗದೇ ಅಬ್ ಕೀ ಬಾರ್ 400…

37 ಡಿಗ್ರಿ ಸೆಲ್ಸಿಯಸ್ ದಾಖಲು: ಬೆಂಗಳೂರಿನಲ್ಲಿ 5 ವರ್ಷದಲ್ಲೇ ಗರಿಷ್ಠ ಬಿಸಿಲು!

ಹವಾನಿಯಂತ್ರಿತ ನಗರಿ ಎಂದೇ ಹೆಸರಾಗಿದ್ದ ಬೆಂಗಳೂರು ಇದೀಗ ಬೆಂದ ನಗರಿ ಆಗುತ್ತಿದೆ. ಬಿಸಿಲಿನ ಝಳಕ್ಕೆ ಜನರು ತತ್ತರಿಸುತ್ತಿದ್ದು, ಮಾರ್ಚ್ ತಿಂಗಳ ಬಿಸಿಲು ಕಳೆದ 5 ವರ್ಷಗಳಲ್ಲೇ ಗರಿಷ್ಠ ಎಂದು ದಾಖಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ 37 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಕನಿಷ್ಠ ಉಷ್ಣಾಂಶ 2.4 ಡಿಗ್ರಿ ಸೆಲ್ಸಿಯಸ್ ಆಗಿದೆ. ಇದು ಮಾರ್ಚ್ ತಿಂಗಳ ಉಷ್ಣಾಂಶದಲ್ಲಿ ಕಳೆದ…

ಬ್ಲಾಕ್ ಮನಿ ಇಟ್ಟುಕೊಂಡರೆ ಪ್ರಶ್ನಿಸಬಾರದೇ?: ಬೊಮ್ಮಾಯಿ

ಕಾಂಗ್ರೆಸ್ ಯಾವಾಗಲೂ ಬ್ಲಾಕ್ ಮನಿ ಮೇಲೆ ರಾಜಕಾರಣ ಮಾಡುತ್ತದೆ. ಸುಮಾರು 600 ಕೋಟಿ ರೂ.ತೆರಿಗೆ ವಂಚನೆ ಮಾಡಿದೆ. ಅದನ್ನು ಪ್ರಶ್ನೆ ಮಾಡಬಾರದೇ, ಅದಕ್ಕೂ ಚುನಾವಣೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಗದಗನಲ್ಲಿ ಇಂದು ಜೆಡಿಎಸ್ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಜೆಡಿಎಸ್…

ಕೇಜ್ರಿವಾಲ್ ಸಿಂಹ ಇದ್ದಂತೆ, ಜಾಸ್ತಿ ದಿನ ಬಂಧಿಸಿಡಲು ಸಾಧ್ಯವಿಲ್ಲ: ಪತ್ನಿ ಸುನೀತಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಿಂಹ ಇದ್ದಂತೆ. ಅವರನ್ನು ಹೆಚ್ಚು ದಿನ ಬಂಧನದಲ್ಲಿ ಇಡಲು ಸಾಧ್ಯವಿಲ್ಲ ಎಂದು ಕೇಜ್ರಿವಾಲ್ ಪತ್ನಿ ಸುನೀತಾ ಹೇಳಿದ್ದಾರೆ. ಮದ್ಯ ನೀತಿ ಹಗರಣದಲ್ಲಿ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಭಾನುವಾರ ಅವರು ಮಾತನಾಡಿದರು. ರಾಜಕೀಯ ಉದ್ದೇಶಕ್ಕಾಗಿ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆಯೇ ಹೊರತು ಅವರು…

ಬರ್ತಡೆಗೆ ಆನ್ ಲೈನ್ ನಲ್ಲಿ ತರಿಸಿದ ಕೇಕ್ ತಿಂದು 10 ವರ್ಷದ ಬಾಲಕಿ ಸಾವು

ತನ್ನ ಬರ್ತಡೆಗೆಂದು ಆನ್ ಲೈನ್ ನಲ್ಲಿ ತರಿಸಿದ್ದ ಕೇಕ್ ತಿಂದ ನಂತರ 10 ವರ್ಷದ ಬಾಲಕಿ ಮೃತಪಟ್ಟ ಆಘಾತಕಾರಿ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ. ಬರ್ತಡೆ ಕೇಕ್ ತಿಂದ ನಂತರ ಅಕ್ಕ ಮತ್ತು ತಂಗಿ ಅಸ್ವಸ್ಥರಾಗಿದ್ದು, ಮಾನ್ವಿ ಎಂಬ ಯುವತಿ ಮೃತಪಟ್ಟಿದ್ದಾರೆ. ಮಗಳ ಸಾವಿಗೆ ಬರ್ತಡೆಗೆ ತರಿಸಿದ್ದ ಕೇಕ್ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ….

ಬಾಬರ್ ಅಜಮ್ ಪಾಕಿಸ್ತಾನ ಏಕದಿನ, ಟಿ-20 ನಾಯಕನಾಗಿ ಪುನರಾಯ್ಕೆ

ಪಾಕಿಸ್ತಾನ ಏಕದಿನ ಮತ್ತು ಟಿ-20 ಕ್ರಿಕೆಟ್ ತಂಡದ ನಾಯಕರಾಗಿ ಬಾಬರ್ ಅಜಮ್ ಅವರನ್ನು ಪುನರಾಯ್ಕೆ ಮಾಡಲಾಗಿದೆ. 2023ರ ಏಕದಿನ ವಿಶ್ವಕಪ್ ಆಘಾತದ ಹಿನ್ನೆಲೆಯಲ್ಲಿ ನಾಯಕ ಸ್ಥಾನ ಕಳೆದುಕೊಂಡಿದ್ದ ಬಾಬರ್ ಅಜಮ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಾಯಕನಾಗಿ ಮರು ನೇಮಕ ಮಾಡಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಪ್ರಕಟಿಸಿದ್ದು, ಬಿಳಿ ಚೆಂಡಿನ…

ಇಸ್ರೇಲ್ ಗೆ 2000 ಬಾಂಬ್ ಕಳುಹಿಸಿಕೊಟ್ಟ ಅಮೆರಿಕ!

ಗಾಜಾ ರಾಫಾಹ್ ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಅಮೆರಕ ಇಸ್ರೇಲ್ ಗೆ ಶತಕೋಟಿ ಡಾಲರ್ ಮೊತ್ತದ 2000 ಬಾಂಬ್ ಹಾಗೂ ಯುದ್ಧ ವಿಮಾನಗಳನ್ನು ಕಳುಹಿಸಿಕೊಟ್ಟಿದೆ. ಗಾಜಾ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸುತ್ತಿದ್ದ ಅಮೆರಿಕ ಇದೀಗ ಬಾಂಬ್ ಹಾಗೂ ಯುದ್ಧ ವಿಮಾನಗಳನ್ನು ಕಳುಹಿಸಿಕೊಟ್ಟಿರುವುದು ಅಚ್ಚರಿ ಉಂಟು ಮಾಡಿದೆ. 2000 ಪೌಂಡ್ ತೂಕದ 1800 ಎಂಕೆ84, 500 ಎಂಕೆ82…

ತಮಿಳು ಖ್ಯಾತ ನಟ 48 ವಯಸ್ಸಿಗೆ ಹೃದಯಾಘಾತದಿಂದ ನಿಧನ

ತಮಿಳು ಚಿತ್ರರಂಗದ ಖ್ಯಾತ ಪೋಷಕ ನಟ ಡೇನಿಯಲ್ ಬಾಲಾಜಿ 48 ವಯಸ್ಸಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಡೇನಿಯಲ್ ಮೃತಪಟ್ಟಿದ್ದಾರೆ. ಡೇನಿಯಲ್ ಅವರ ಅಕಾಲಿಕ ನಿಧನದಿಂದ ತಮಿಳು ಚಿತ್ರರಂಗ ಆಘಾತಕ್ಕೆ ಒಳಗಾಗಿದೆ. ಡೇನಿಯಲ್ ಸ್ಟಾರ್ ವಿಜಯ್, ಕಮಲ್ ಹಾಸನ್…