ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ 22ನೇ ಮದುವೆ ವಾರ್ಷಿಕೋತ್ಸವವನ್ನು ಭರ್ಜರಿಯಾಗಿ ಇಂಡೋನೇಷ್ಯಾದ ಬಾಲಿಯಲ್ಲಿ ಆಚರಿಸಿಕೊಂಡಿದ್ದು, ಇಬ್ಬರು ಡ್ಯಾನ್ಸ್ ಮಾಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚಿತ್ರದುರ್ಗದ ರೇಣುಕಾಚಾರ್ಯ ಕೊಲೆ ಪ್ರಕರಣದ ವಿಚಾರಣೆ ನಡೆಯುತ್ತಿರುವ ಮಧ್ಯೆಯೇ ಜಾಮೀನು ಪಡೆದಿರುವ ದರ್ಶನ್, ಮದುವೆ ವಾರ್ಷಿಕೋತ್ಸವದ ಅಂಗವಾಗಿ ಇಂಡೋನೇಷ್ಯಾಗೆ ಪ್ರಯಾಣ ಬೆಳೆಸಿದ್ದಾರೆ.
ಮದುವೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿ ಸಂತಸ ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಕುಟುಂಬದ ಸದಸ್ಯರು ಹಾಗೂ ನಟ ಚಿಕ್ಕಣ್ಣ ಸೇರಿದಂತೆ ಕೆಲವೇ ಮಂದಿಯ ಜೊತೆ ಪಾರ್ಟಿ ಮಾಡಿ ಸಂಭ್ರಮ ಆಚರಿಸಿದ್ದಾರೆ.
ಪಾರ್ಟಿಯಲ್ಲಿ ಹಿಂದಿ ಹಾಡು ಹಾಗೂ ಮುದ್ದು ರಾಕ್ಷಸಿ ಎಂದು ಹಾಡಿ ದರ್ಶನ್ ಹಾಗೂ ವಿಜಯಲಕ್ಷ್ಮೀ ಡ್ಯಾನ್ಸ್ ಮಾಡಿರುವ ವೀಡಿಯೋ ವೈರಲ್ ಆಗಿದೆ.
ವಾಮನ ಚಿತ್ರದ ಮುದ್ದು ರಾಕ್ಷಸಿ ಹಾಡನ್ನು ದರ್ಶನ್ ಹಾಡಿ ಪತ್ನಿಯನ್ನು ಹೊಗಳಿದ್ದಾರೆ. ಇದರಿಂದ ಎಲ್ಲರೂ ಜೋರಾಗಿ ಕಿರುಚಿ ಸಂಭ್ರಮಿಸಿರುವ ದೃಶ್ಯಗಳು ವೀಡಿಯೋದಲ್ಲಿ ಇವೆ.



