ಸತ್ಸಂಗ (ಪ್ರಾರ್ಥನಾ ಸಭೆ)ದಲ್ಲಿ ಸಂಭವಿಸಿದ ಕಾಲ್ತುಳಿದಲ್ಲಿ ಮೂವರು ಮಕ್ಕಳು ಸೇರಿದಂತೆ 27 ಮಂದಿ ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ಸಂಭವಿಸಿದೆ.
ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮೃತಪಟ್ಟವರಲ್ಲಿ 3 ಮಕ್ಕಳು ಹಾಗೂ 23 ಮಹಿಳೆಯರಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.
ಪ್ರಾರ್ಥನಾ ಸಭೆಯಲ್ಲಿ ಭಾಗಿಯಾಗಿದ್ದ ಬಹುತೇಕ ಮಂದಿ ಅಸುನೀಗಿದ್ದು, ಕಾಲ್ತುಳಿತಕ್ಕೆ ಕಾರಣ ತಿಳಿದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದಾಗ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದ್ದು, ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.
ಘಟನಾ ಸ್ಥಳಕ್ಕೆ 27 ಮೃತದೇಹಗಳು ಪತ್ತೆಯಾಗಿದ್ದು, ಇದರಲ್ಲಿ 3 ಮಕ್ಕಳು ಹಾಗೂ 23 ಮಹಿಳೆಯರದ್ದಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ರಾಜೇಶ್ ಕುಮಾರ್ ತಿಳಿಸಿದ್ದಾರೆ.