Wednesday, 11 November 2026 — Kannadavahini
BREAKING NEWS
ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ರಾಜ್ಯ ಕಬ್ಬು ಬೆಳೆಗಾರರ ಹೋರಾಟ ತಾತ್ಕಾಲಿಕ ವಾಪಸ್: ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಹಸಿರು ನಿಶಾನೆ ರಾಜ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರಿಂದ ಜೈಲ್ ಭರೋ ಹೋರಾಟ ತೀವ್ರ ಕಾನೂನು ವಶಕ್ಕೆ ಪಡೆದ ಕ್ಷಣದಿಂದಲೇ 24 ಗಂಟೆಗಳ ಗಡುವು ಆರಂಭ: ಸುಪ್ರೀಂ ಮಹತ್ವದ ತೀರ್ಪು
ಜಿಲ್ಲಾ ಸುದ್ದಿ

ಬೆಳೆ ಕೈ ಕೊಟ್ಟಿದ್ದರಿಂದ ನದಿಗೆ ಹಾರಿ 28 ವರ್ಷದ ರೈತ ಆತ್ಮಹತ್ಯೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 17 ವೀಕ್ಷಣೆಗಳು
hassan farmer

ಸಾಲಭಾದೆ ತಾಳಲಾರದೆ ಯುವ ರೈತ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲೂರು ತಾಲ್ಲೂಕಿನ ಮಂದಿರ ಗ್ರಾಮದ ಬಳಿ ನಡೆದಿದೆ.

ನಿರಂಜನ್ ಡಿ. (28) ನದಿಗೆ ಹಾರಿ ಆತ್ಮಹತ್ಯೆ ಶರಣಾದ ಯುವ ರೈತ. ಮೃತ ನಿರಂಜನ್ ಕೃಷಿ ಹಾಗೂ ವಿವಿಧ ಬೆಳೆ ಬೆಳೆಯಲು ಬ್ಯಾಂಕ್, ಫೈನಾನ್ಸ್, ಸ್ನೇಹಿತರ ಬಳಿ ಲಕ್ಷಾಂತರ ರೂ ಸಾಲ ಸೇರಿದಂತೆ ಕೃಷಿಗಾಗಿ ಚಿನ್ನಾಭರಣಗಳನ್ನು ಸಹ ಅಡವಿಟ್ಟು ಸಾಲ ಮಾಡಿದ್ದರು.

ಬೆಳೆ ಕೈಕೊಟ್ಟು ಬಾರಿ ನಷ್ಟ ಅನುಭವಿಸಿದ್ದ ನಿರಂಜನ್ ಮೇ 4 ರಂದು ರಾತ್ರಿ ಕುಂದೂರು ಗ್ರಾಮದ ಮನೆಯಿಂದ ಬೈಕ್‌ನಲ್ಲಿ ತೆರಳಿದ್ದರು. ಮಾರನೇ ದಿನ ಶೆಟ್ಟಿಹಳ್ಳಿ ಸೇತುವೆ ಬಳಿ ಬೈಕ್ ಪತ್ತೆಯಾಗಿತ್ತು.

ನಿರಂಜನ್ ಕುಟುಂಬಸ್ಥರು ಪೊಲೀಸರಿಗೆ ನಿರಂಜನ್ ಕಾಣೆಯಾಗಿದ್ದಾನೆ ಎಂದು ದೂರು ನೀಡಿದ್ದರು. ನಿರಂಜನ್‌ಗಾಗಿ ಹುಡುಕಾಟ ನಡೆಸಿದ್ದ ವೇಳೆ ಮಂದಿರ ಗ್ರಾಮದ ಹೇಮಾವತಿ ನದಿಯಲ್ಲಿ ನಿರಂಜನ್ ಶವ ತೇಲುತ್ತಿದ್ದ ಸ್ಥಿತಿಯನ್ನು ಪತ್ತೆಯಾಗಿದೆ.

ಸ್ಥಳೀಯರು ಹಾಗೂ ಪೊಲೀಸರು ಶವವನ್ನು ಹೊರಕ್ಕೆ ತೆಗೆದಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೋಲಿಸರು ಪರಿಶೀಲನೆ ನಡೆಸುತ್ತಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8409 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment