ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದ ಅವಾನಿ ಲೀಗ್ ಪಕ್ಷದ ಕಾರ್ಯಕರ್ತರು ಹಾಗೂ ಅವರ ಕುಟುಂಬದವರು ಸುಮಾರು 29 ಶವಗಳು ಪತ್ತೆಯಾಗಿದೆ.
ದೇಶಾದ್ಯಂತ ಅವಾನಿ ಲೀಗ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, ಅವಾನಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗಿವೆ.
76 ವರ್ಷದ ಶೇಖ್ ಹಸೀನಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ಬೆನ್ನಲ್ಲೇ ಹಿಂಸಾಚಾರ ಏಕಮುಖವಾಗಿದ್ದು, ಅವಾನಿ ಪಕ್ಷವನ್ನು ಗುರಿಯಾಗಿಸಿ ದಾಳಿ ನಡೆಯುತ್ತಿವೆ.
ಸತ್ಕಿರಾ ಪ್ರದೇಶವೊಂದರಲ್ಲೇ ಅವಾನಿ ಪಕ್ಷದ 10 ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಇದರಲ್ಲಿ 5 ಮಂದಿ ಅಪ್ರಾಪ್ತರು ಎಂದು ಹೇಳಲಾಗಿದೆ. ಅಲ್ಲದೇ ಪಕ್ಷದ ಮುಖಂಡರ ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ಮಾಡಿ ಹಾನಿ ಮಾಡಲಾಗಿದ್ದು, ಅಂಗಡಿಗಳನ್ನು ಲೂಟಿ ಮಾಡಲಾಗುತ್ತಿದೆ.