ಆಲ್ ರೌಂಡ್ ಪ್ರದರ್ಶನ ನೀಡಿದ ಭಾರತ ತಂಡ 86 ರನ್ ಗಳಿಂದ ಬಾಂಗ್ಲಾದೇಶ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಟಿ-20 ಸರಣಿಯನ್ನು 2-0ಯಿಂದ ವಶಪಡಿಸಿಕೊಂಡಿದೆ.
ದೆಹಲಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಭಾರತ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 221 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಬಾಂಗ್ಲಾದೇಶ 9 ವಿಕೆಟ್ ಗೆ 139 ರನ್ ಗಳಿಸಲಷ್ಟೇ ಶಕ್ತವಾಯಿತು. ಬಾಂಗ್ಲಾ ವಿರುದ್ಧ ರನ್ ಗಳ ಆಧಾರದಲ್ಲಿ ದಾಖಲಿಸಿದ ಅತೀ ದೊಡ್ಡ ಗೆಲುವಾಗಿದೆ.
ಕಠಿಣ ಗುರಿ ಬೆಂಬತ್ತಿದ ಬಾಂಗ್ಲಾದೇಶ ಭಾರತದ ಸಂಘಟಿತ ದಾಳಿಗೆ ತತ್ತರಿಸಿ ನಿಯಮಿತವಾಗಿ ವಿಕೆಟ್ ಕಳೆದುಕೊಂಡು ಶರಣಾಯಿತು. ತಂಡದ ಪರ ಮೊಹಮದುಲ್ಲಾ 39 ಎಸೆತಗಳಲ್ಲಿ 3 ಸಿಕ್ಸರ್ ಒಳಗೊಂಡ 41 ರನ್ ಬಾರಿಸಿದರೆ, ಉಳಿದವರು ಅಲ್ಪ ಮೊತ್ತಕ್ಕೆ ನಿರ್ಗಮಿಸಿದರು. ಭಾರತದ ಪರ ನಿತೀಶ್ ಕುಮಾರ್ ರೆಡ್ಡಿ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದು ಮಿಂಚಿದರು.