ದೆಹಲಿ ನ್ಯಾಯಾಧೀಶ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಹಣ ಪತ್ತೆಯಾಗಿದ್ದ ಪ್ರಕರಣದ ತನಿಖೆಯನ್ನು ಮೂವರು ನ್ಯಾಯಾಧೀಶರ ಸಮಿತಿ ನಡೆಸಲಿದೆ.
ನ್ಯಾಯಾಧೀಶ ಯಶವಂತ್ ವರ್ಮಾ ಅವರನ್ನು ನ್ಯಾಯಾಲಯದ ಯಾವುದೇ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ದೆಹಲಿ ಮುಖ್ಯ ನ್ಯಾಯಮೂರ್ತಿ ಆದೇಶಿಸಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೂವರು ನ್ಯಾಯಾಧೀಶರ ಸಮಿತಿಯನ್ನು ರಚಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಶೀಲಾ ನಾಗು, ಹಿಮಾಚಲ ಮುಖ್ಯ ನ್ಯಾಯಮೂರ್ತಿ ಜಿಎಸ್ ಸಂಡೆವಾಲಿಯಾ ಮತ್ತು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಅನು ಶ್ರೀನಿವಾಸನ್ ನೇತೃತ್ವದ ಮೂವರು ನ್ಯಾಯಾಧೀಶರ ಸಮಿತಿ ಹಣ ಪತ್ತೆ ಪ್ರಕರಣದ ತನಿಖೆ ನಡೆಸಲಿದೆ.
ಯಶವಂತ್ ವರ್ಮಾ ಅವರನ್ನು ಪುನಃ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾವಣೆ ಮಾಡಲು ಕೊಲಿಜಿಯಂ ನ್ಯಾಯಾಧೀಶರು ತೀರ್ಮಾನಿಸಿದ್ದಾರೆ. ಆದರೆ ಇದಕ್ಕೆ ಇತರೆ ನ್ಯಾಯಾಧೀಶರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ತಮ್ಮ ಮನೆಯಲ್ಲಿ ಸಂಭವಿಸಿದ ಅಗ್ನಿ ಅನಾಹುತದ ವೇಳೆ ಯಾವುದೇ ಹಣ ಪತ್ತೆಯಾಗಿಲ್ಲ. ನನ್ನ ವಿರುದ್ಧ ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಎಂದು ನ್ಯಾಯಾಧೀಶ ಯಶವಂತ್ ವರ್ಮಾ ಸ್ಪಷ್ಟನೆ ನೀಡಿದ್ದಾರೆ.



