ಹರಿಯಾಣದ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಮೂವರು ಪಕ್ಷೇತರ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ.
ಮೂವರು ಪಕ್ಷೇತರ ಶಾಸಕರಾದ ಸೋಂಬಿರ್ ಸಂಗ್ವನ್, ರಣಭೀರ್ ಗೋಲನ್ ಮತ್ತು ಧರ್ಮಪಾಲ್ ಗೋಂಡರ್ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿದ್ದಾರೆ.
ರೋಹ್ಟಕ್ ನಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೂವರು ಶಾಸಕರು ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ನೀಡುವುದಾಗಿ ಘೋಷಿಸಿದರು.
ರೈತರ ಪರ ಧೋರಣೆ ಸೇರಿದಂತೆ ಸರ್ಕಾರದ ಧೋರಣೆ ಖಂಡಿಸಿ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿರುವುದಾಗಿ ಶಾಸಕರು ಹೇಳಿದ್ದಾರೆ. ಆದರೆ ಸರ್ಕಾರದಲ್ಲಿ ತಮಗೆ ಯಾವುದೇ ಸಚಿವ ಸ್ಥಾನ ನೀಡದ ಕಾರಣ ಅಸಮಾಧಾನದಿಂದ ಬೆಂಬಲ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.