Wednesday, May 13, 2026
Google search engine
HomeಅಪರಾಧMandya 13 ವರ್ಷದ ಬಾಲಕನ ಸಿಡಿಸಿದ ಗುಂಡಿಗೆ 3 ವರ್ಷದ ತಮ್ಮ ಬಲಿ!

Mandya 13 ವರ್ಷದ ಬಾಲಕನ ಸಿಡಿಸಿದ ಗುಂಡಿಗೆ 3 ವರ್ಷದ ತಮ್ಮ ಬಲಿ!

ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ಸಿಡಿದ ಗುಂಡಿಗೆ 3 ವರ್ಷದ ತಮ್ಮ ಮೃತಪಟ್ಟ ದಾರುಣ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ಸಂಭವಿಸಿದೆ.

ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಮೂರ್ತಿ ಎಂಬುವರಿಗೆ ಸೇರಿದ ಕೋಳಿ ಫಾರಂನಲ್ಲಿ ಈ ಘಟನೆ ನಡೆದಿದೆ.

ಕೋಳಿಫಾರಂನಲ್ಲಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಶಶಾಂಕ್ ಮತ್ತು ಲಿಪಿಕಾ ದಂಪತಿಯ 13 ವರ್ಷದ ಬಾಲಕ ಸುದೀಪ್ ದಾಸ್ ಸಿಡಿಸಿದ ಗುಂಡಿಗೆ ೩ ವರ್ಷದ ಮಗು ಮೃತಪಟ್ಟಿದೆ.

ಕೋಳಿ ಫಾರಂನಲ್ಲಿ ಭದ್ರತೆಗಾಗಿ ಇಡಲಾಗಿದ್ದ ಗನ್ ನಲ್ಲಿ ಗುಂಡುಗಳನ್ನು ತುಂಬಲಾಗಿತ್ತು. ಅಣ್ಣ ತಮ್ಮ ಇಬ್ಬರೂ ರಕ್ಷಣೆಗೆ ಇಡಲಾಗಿದ್ದ ಗನ್ ತೆಗೆದುಕೊಂಡು ಕಳ್ಳ-ಪೊಲೀಸ್ ಆಟವಾಡುತ್ತಿದ್ದರು.

ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹಾರಿದ ಗುಂಡಿನಿಂದ 3 ವರ್ಷದ ಮಗುವಿನ ಹೊಟ್ಟೆ ಸೀಳಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ತೀವ್ರ ರಕ್ತಸ್ರಾವದಿಂದ ಚಿಕಿತ್ಸೆ ಫಲಕಾರಿಯಾಗದೇ ಮಗು ಮೃತಪಟ್ಟಿದೆ. ಘಟನೆಯಲ್ಲಿ ಲಿಪಿಕಾಗೂ ಗಾಯವಾಗಿದೆ.

ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಗನ್ ವಶಕ್ಕೆ ಪಡೆದು ತನಿಖೆ ಕೈಗೊಂಡಿ ದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments