Saturday, June 13, 2026
Google search engine
Homeಬೆಂಗಳೂರುಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ: ಮಕ್ಕಳು ಮನೆಗೆ ವಾಪಸ್

ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ: ಮಕ್ಕಳು ಮನೆಗೆ ವಾಪಸ್

ಬೆಂಗಳೂರು: ಬೆಂಗಳೂರಿನ 40 ಹಾಗೂ ದೆಹಲಿಯ 50 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ದೆಹಲಿಯ ಪಶ್ಚಿಮ ವಿಹಾರ್‌ನಲ್ಲಿರುವ ರಿಚ್‌ಮಂಡ್ ಶಾಲೆಗೆ ಬೆದರಿಕೆ ಸಂದೇಶ ಬಂದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳವು ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಸದ್ಯ ಶಾಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.

ಒಟ್ಟು ದೆಹಲಿಯ 50ಕ್ಕೂ ಅಧಿಕ ಶಾಲೆಗಳಲ್ಲಿ ಬಾಂಬ್ ಬೆದರಿಕೆ ಮೇಲ್ ಹಾಗೂ ಕರೆ ಬಂದಿದ್ದು, ಬಾಂಬ್ ನಿಷ್ಕ್ರಿಯ ದಳದಿಂದ ಶೋಧ ಕಾರ್ಯ ನಡೆಯುತ್ತಿದೆ.

ಬೆಂಗಳೂರಿನ ಆರ್‌ಆರ್ ನಗರ, ಕೆಂಗೇ ಚಾಮರಾಜಪೇಟೆ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ.

ಚಾಮರಾಜಪೇಟೆ ವಿಸ್ಡಮ್ ಅಂತಾರಾಷ್ಟ್ರೀಯ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಶಾಲೆಯಲ್ಲಿದ್ದ 800 ಮಕ್ಕಳನ್ನು ಬೇರೆ ಕಟ್ಟಡಕ್ಕೆ ಶಿಫ್ಟ್ ಮಾಡಲಾಗಿದೆ.

ಬಾಂಬ್ ಬೆದರಿಕೆ ಬಂದ ಹಿನ್ನೆಲೆ ಮಕ್ಕಳನ್ನು ಹೊರಗೆ ಕಳುಹಿಸಿ ತಪಾಸಣೆ ನಡೆಸಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬಾಂಬ್ ನಿಷ್ಕ್ರಿಯ ದಳದಿಂದಲೂ ಪರಿಶೀಲನೆ ನಡೆದಿದೆ.

ಇಂದು ಬೆಳಿಗ್ಗೆ 7:30ರ ಸುಮಾರಿಗೆ ನಮಗೆ ಮೇಲ್ ಬಂದಿದೆ. ನಾವು ಕೂಡಲೇ ನಾವು ಪೊಲೀಸರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದೆವು. ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಯಾರೋ ಮಾನಸಿಕ ಪ್ರಭಾವಿತ ವ್ಯಕ್ತಿ ಮೇಲ್ ಮಾಡಿದ್ದಾನೆ, ಸದ್ಯ ಮಕ್ಕಳಿಗೆ ಎಕ್ಸಾಂ ಇದ್ದು, ಘಟನೆ ಬಗ್ಗೆ ದೂರು ಕೊಡಲಾಗಿದೆ ಎಂದು ಸೈಂಟ್ ಜರ್ಮನ್ ಶಾಲೆಯ ಪ್ರಿನ್ಸಿಪಲ್ ಮೋನಿಕಾ ಅಂಟೋನಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments