ರಾಜ್ಯದಮಲ್ಲಿ ಮುಂಗಾರು ಮಳೆಯ ಅಬ್ಬರ ಕಡಿಮೆ ಆಗುತ್ತಿದ್ದರೂ ಡೆಂಗ್ಯೂ ಅಬ್ಬರ ಕಡಿಮೆ ಆಗುವ ಸೂಚನೆ ಕಾಣುತ್ತಿಲ್ಲ. ಇದರಿಂದ ದಿನದಿಂದ ದಿನಕ್ಕೆ ಆತಂಕ ಹೆಚ್ಚಾಗುತ್ತಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 469 ಡೆಂಗ್ಯೂ ಸೋಂಕು ಪ್ರಕರಣಗಳು ವರದಿಯಾಗಿದ್ದು, 487 ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಒಟ್ಟಾರೆ ಸೋಂಕಿತರ ಸಂಖ್ಯೆ 15 ಸಾವಿರ ಪ್ರಕರಣಗಳು ವರದಿಯಾಗಿವೆ.
ರಾಜಧಾನಿ ಬೆಂಗಳೂರಿನ್ಲಲಿ 229 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, ಅದರಲ್ಲೂ 12 ವರ್ಷದೊಳಗಿನ 12 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ.
ಕಳೆದ 24 ಗಂಟೆಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 229, ಹಾಸನ 28, ಬೆಳಗಾವಿ 21, ಚಿತ್ರದುರ್ಗ 20 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.