Thursday, May 14, 2026
Google search engine
Homeರಾಜ್ಯಸಿವಿಲ್ ಸೇವಾ ನೇಮಕಾತಿಯಲ್ಲಿ 5 ವರ್ಷ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ

ಸಿವಿಲ್ ಸೇವಾ ನೇಮಕಾತಿಯಲ್ಲಿ 5 ವರ್ಷ ಸಡಿಲಿಕೆ: ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ

2027, ಡಿಸೆಂಬರ್ 31ರವರೆಗೆ ನಡೆಯುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಈ ಮೂಲಕ  ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ

ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಡಿಸೆಂಬರ್.31, 2027ರವರೆಗೆ ಹೊರಡಿಸುವ ಅಧಿಸೂಚನೆಗೆ ಈ ನಿಯಮ ಅನ್ವಯವಾಗಲಿದೆ. ಸಾಮಾನ್ಯ ವರ್ಗಕ್ಕೆ 35 ರಿಂದ 40 ವರ್ಷ, ಎಸ್ಸಿ-ಎಸ್ಟಿಗಳಿಗೆ 38ರಿಂದ 43 ವರ್ಷಕ್ಕೆ ವಯೋಮಿತಿ ಸಡಿಲಿಕೆಯ ನಿರ್ಧಾರ ಕೈಗೊಳ್ಳಲಾಗಿದೆ.

ಸಚಿವ ಸಂಪುಟದ ತೀರ್ಮಾನಗಳು

22 ಮಠಗಳಿಗೆ ಜಾಗ ಮಂಜೂರು

22 ಹಿಂದುಳಿದ/ ದಲಿತ ಮಠಗಳಿಗೆ ಜಾಗ ಮಂಜೂರು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಬೆಂಗಳೂರು ನಗರ‌ ಜಿಲ್ಲೆ, ಉತ್ತರ ತಾಲೂಕಿನ ದಾಸನಪುರ ಹೋಬಳಿಯಲ್ಲಿ ಜಾಗ ಮಂಜೂರಿಗೆ ಒಪ್ಪಿಗೆ ನೀಡಲಾಗಿದೆ. ರಾವುತ್ತನಹಳ್ಳಿ ಗ್ರಾಮದ ಸರ್ವೇ 57, 58 ರಲ್ಲಿರುವ ಸರ್ಕಾರಿ ಜಮೀನು ದಲಿತ, ಹಿಂದುಳಿದ ವರ್ಗಗಳ‌ 22 ಮಠಗಳಿಗೆ ಮಂಜೂರು ಮಾಡಲು ಸಮ್ಮತಿಸಲಾಗಿದೆ.

ಅಲೆಮಾರಿ ಸಮುದಾಯಕ್ಕೆ ಮನೆ

ರಾಜ್ಯದ ಅಲೆಮಾರಿ/ಅರೆ ಅಲೆಮಾರಿ ಸಮುದಾಯಕ್ಕೆ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಅಲೆಮಾರಿ ಅರೆ ಅಲೆಮಾರಿ ಸಮುದಾಯದ ಜನರಿಗೆ ಮನೆ ನಿರ್ಮಾಣಕ್ಕೆ ಸರ್ಕಾರದ ಸಹಾಯ ಹಸ್ತ ಚಾಚಲು ನಿರ್ಧರಿಸಿದೆ.

ಅಂತಿಮವಾಗಿ ಅರೆ-ಅಲೆಮಾರಿ ಸಮುದಾಯದ ಜನರಿಗೆ 1200 ಚದರ ಅಡಿ ವಿಸ್ತೀರ್ಣದ ನಿವೇಶನದಲ್ಲಿ 600 ಚದರ ಅಡಿಗಳ ವಿಸ್ತೀರ್ಣದ ಮನೆಯನ್ನು ಮೂಲಭೂತ ಒಳಗೊಂಡಂತೆ ಸೌಕರ್ಯಗಳನ್ನು ರೂ 100.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡುವುದು.

ಬೆಂಗಳೂರಿನ HSR ಬಡಾವಣೆಯಲ್ಲಿನ KEONICS ಸೌಲಭ್ಯ “CATS (Center for Applied Al for Tech Solutions)” ಹೆಸರಿಸಲಾದ AI ಉತ್ಕೃಷ್ಟತಾ ಕೇಂದ್ರ (AI-CoE) ಅನ್ನು ರೂ.20.00 ಕೋಟಿಗಳ ಅಂದಾಜು ಮೊತ್ತದಲ್ಲಿ NASSCOM ಸಹಯೋಗದೊಂದಿಗೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡುವುದು.

8 ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡಗಳಿಗೆ ಪೌಷ್ಠಿಕ ಆಹಾರ

ಪೌಷ್ಠಿಕ ಆಹಾರ ಯೋಜನೆಯಡಿ ರಾಜ್ಯದ 8 ಜಿಲ್ಲೆಗಳಲ್ಲಿ ಒಟ್ಟು 50046 ಪರಿಶಿಷ್ಟ ಪಂಗಡಗಳಿಗೆ ಸೇರಿದ ಕುಟುಂಬಗಳಿಗೆ ಆಹಾರ ಪದಾರ್ಥಗಳನ್ನು ఒಟ್ಟು ರೂ 145.03 ಕೋಟಿಗಳ ಅಂದಾಜು ಮೊತ್ತದಲ್ಲಿ (ಪ್ರತಿ ಕಿಟ್‌ ಅಂದಾಜು ರೂ.2415.38/- ರಂತೆ) ಖರೀದಿಸಿ ಮುಂದಿನ 12 ತಿಂಗಳವರೆಗೆ ವಿತರಿಸಲು ಆಡಳಿತಾತ್ಮಕ ಅನುಮೋದನೆ ನೀಡುವುದು.

ಕೊಪ್ಪಳ ಜಿಲ್ಲೆಯ ತಳಕಲ್‌ನಲ್ಲಿ GTTC-MSDC (ಬಹು ಕೌಶಲ್ಯಾಭಿವೃದ್ಧಿ ಕೇಂದ್ರ)ದ ಎರಡನೇ ಹಂತದ ನಿರ್ಮಾಣ ಕಾಮಗಾರಿ ಗಳನ್ನು KKRDB ಅನುದಾನದಿಂದ ರೂ.66.75 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ‌ ಅನುಮೋದನೆ ನೀಡುವುದು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments