ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 53 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಯಾವುದೇ ಸಾವು ವರದಿಯಾಗಿಲ್ಲ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಒಂದೇ ದಿನ 53 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 582ಕ್ಕೆ ಏರಿಕೆಯಾಗಿದ್ದು, 324 ಸಕ್ರಿಯ ಪ್ರಕರಣಗಳಿವೆ. ಇದುವರೆಗೆ ಕೊರೊನಾಗೆ 3 ಮಂದಿ ಬಲಿಯಾಗಿದ್ದಾರೆ.



