Sunday, May 31, 2026
Google search engine
Homeರಾಜ್ಯ56,432 ಹುದ್ದೆಗಳ ನೇಮಕ ಘೋಷಣೆ: ಯಾವ ಇಲಾಖೆಯಲ್ಲಿ ಎಷ್ಟು?

56,432 ಹುದ್ದೆಗಳ ನೇಮಕ ಘೋಷಣೆ: ಯಾವ ಇಲಾಖೆಯಲ್ಲಿ ಎಷ್ಟು?

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಬಜೆಟ್ ನಲ್ಲಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ನೇಮಕ ಘೋಷಿಸಿದ್ದಾರೆ.

ಶುಕ್ರವಾರ ಮಂಡಿಸಿದ ಬಜೆಟ್ ನಲ್ಲಿ ವಿವಿಧ ಇಲಾಖೆಗಳಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು, ಹಂತ ಹಂತವಾಗಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನಲ್ಲಿ 56,432 ಹುದ್ದೆಗಳನ್ನು ನೇಮಕ ಮಾಡಲಾಗುವುದು ಎಂದರು.

ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನ, ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ, ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಮತ್ತು ಈ ವರ್ಗಗಳ ಅಭಿವೃದ್ಧಿ ಬಗ್ಗೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚನೆ.

. ಉತ್ತರ ಕರ್ನಾಟಕದಲ್ಲಿ ಆರ್ಥಿಕ ಅಭಿವೃದ್ಧಿ ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಸುಮಾರು 1,000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು.

ಯಾವ ಇಲಾಖೆಯಲ್ಲಿ ಎಷ್ಟು ಉದ್ಯೋಗ ನೇಮಕ?

ಶಾಲಾ-ಕಾಲೇಜುಗಳಲ್ಲಿ 15,000 ಮತ್ತು ವಿಶ್ವವಿದ್ಯಾಲಯದಲ್ಲಿ 2,000 ಬೋಧಕ ಹುದ್ದೆಗಳ ಭರ್ತಿಗೆ ಕ್ರಮ

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿಗೆ ಕ್ರಮ

ಗೃಹ ಇಲಾಖೆಯಲ್ಲಿ ಖಾಲಿ ಇರುವ 8,000 ಹುದ್ದೆಗಳ ಭರ್ತಿಗೆ ಕ್ರಮ

ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 2,000 ಹುದ್ದೆಗಳ ಭರ್ತಿಗೆ ಕ್ರಮ

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 2.500 ಹುದ್ದೆಗಳ ಭರ್ತಿಗೆ ಕ್ರಮ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments