ಬೆಂಗಳೂರು: ಬಹುನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 7 ಲಕ್ಷ ವಿದ್ಯಾರ್ಥಿಗಳ ಪೈಕಿ 6 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಗುರುವಾರ ಮಧ್ಯಾಹ್ನ ಪಿಯುಸಿ ವೆಬ್ ಸೈಟ್ ನಲ್ಲಿ ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡದ ಆಳ್ವಾಸ್ ಕಾಲೇಜಿನ ದಿಶಾ ಹಾಗೂ ಬೆಂಗಳೂರಿನ ಜೈನ್ ಕಾಲೇಜಿನ ವಿದ್ಯಾರ್ಥಿನಿ ಅದಿತಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.
ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೇ.86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ ಶೇ.74ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಶೇ.12.5ರಷ್ಟು ವಿದ್ಯಾರ್ಥಿಗಳು ಹೆಚ್ಚು ಫಲಿತಾಂಶ ಬಂದಿದೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.
ಅರ್ಚನಾ ಸಂಗೀತಾ ಕಲಾ ವಿಭಾಗದಲ್ಲಿ 598 ಅಂಕ ಪಡೆದು ಕಲಾ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಒಂದೇ ಕಾಲೇಜಿನ ಇಬ್ಬರು ಪ್ರಥಮ ಸ್ಥಾನ ಹಂಚಿಕೊಂಡಿರುವುದು ವಿಶೇಷ.



