Sunday, May 31, 2026
Google search engine
Homeಬೆಂಗಳೂರುತೋಟಕ್ಕೆ ನುಗ್ಗಿದ ಕಾರು: ಪ್ರವಾಸದಿಂದ ಹಿಂತಿರುಗುತ್ತಿದ್ದ 6 ಮಂದಿ ಪಾರು!

ತೋಟಕ್ಕೆ ನುಗ್ಗಿದ ಕಾರು: ಪ್ರವಾಸದಿಂದ ಹಿಂತಿರುಗುತ್ತಿದ್ದ 6 ಮಂದಿ ಪಾರು!

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಹಾಗೂ ಸೀತಾಳಯ್ಯನಗಿರಿ ವೀಕ್ಷಣೆ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ನುಗ್ಗಿದ ಘಟನೆ ಭಾನುವಾರ ನಡೆದಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸದೇ ಕಾರಿನಲ್ಲಿದ್ದ ಆರು ಮಂದಿ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ.

ಕೈಮರ ಚೆಕ್ ಪೋಸ್ಟ್ ಸಮೀಪ ಈ ಅಪಘಾತ ಸಂಭವಿಸಿದ್ದು, ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ಆರು ಮಂದಿ ಫಾರ್ಚೂನರ್ ಕಾರಿನಲ್ಲಿ ಗಿರಿ ಭಾಗದ ಸೌಂದರ್ಯ ವೀಕ್ಷಣೆ ಮುಗಿಸಿ ಹಿಂದಿರುಗುತ್ತಿದ್ದರು. ಈ ವೇಳೆ ರಸ್ತೆಯ ತಿರುವೊಂದರಲ್ಲಿ ಕಾರಿನ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಬಿಟ್ಟು ಪಕ್ಕದ ತೋಟದೊಳಗೆ ನುಗ್ಗಿದೆ ಎಂದು ತಿಳಿದುಬಂದಿದೆ.

ಅಪಘಾತದ ರಭಸಕ್ಕೆ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ವಾಹನ ತೋಟದೊಳಗೆ ಕೆಲ ಅಂತರ ಸಾಗಿದ ಬಳಿಕ ನಿಂತಿದೆ. ಘಟನೆಯ ಬಳಿಕ ಸ್ಥಳೀಯರು ಹಾಗೂ ಇತರೆ ವಾಹನ ಸವಾರರು ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದವರ ನೆರವಿಗೆ ಮುಂದಾದರು. ಕಾರಿನಲ್ಲಿದ್ದ ಎಲ್ಲರೂ ಸುರಕ್ಷಿತವಾಗಿ ಹೊರಬಂದಿದ್ದು, ಯಾರಿಗೂ ಗಂಭೀರ ಗಾಯಗಳಾಗಿಲ್ಲ.

ಈ ಘಟನೆಯ ಬಗ್ಗೆ ಸುದ್ದಿ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ಮಾಹಿತಿಯ ಪ್ರಕಾರ ರಸ್ತೆ ತಿರುವಿನಲ್ಲಿ ವೇಗ ಹಾಗೂ ನಿಯಂತ್ರಣ ಕಳೆದು ಕೊಂಡಿರುವುದೇ ಅಪಘಾತಕ್ಕೆ ಕಾರಣವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments