Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್
ರಾಜಕೀಯ

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ: ವಿಜಯೇಂದ್ರ ಗಂಭೀರ ಆರೋಪ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 17 ವೀಕ್ಷಣೆಗಳು

ಬೆಂಗಳೂರು: 6 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಅಬಕಾರಿ ಹಗರಣದ ಸಮರ್ಪಕ ತನಿಖೆ ಆಗಲೇಬೇಕು. ಹೈಕೋರ್ಟಿನ ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ತನಿಖೆ ಆಗಲೇಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

ವಿಧಾನಸೌಧದ ಗಾಂಧೀ ಪ್ರತಿಮೆ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಬಕಾರಿ ಹಗರಣದಲ್ಲಿ ಸ್ವತಃ ಅಬಕಾರಿ ಸಚಿವರ ಹೆಸರು ಕೇಳಿಬರುತ್ತಿದೆ. ಅಬಕಾರಿ ಸಚಿವರ ಕುಟುಂಬದ ಸದಸ್ಯರ ಹೆಸರು ಕೇಳಿಬರುತ್ತಿದೆ. ಅದರ ನಡುವೆಯೂ ಮುಖ್ಯಮಂತ್ರಿಗಳು ಸದನದಲ್ಲಿ ಚರ್ಚೆ ಮಾಡಲು ಬಿಡುತ್ತಿಲ್ಲ ಎಂದು ಆಕ್ಷೇಪಿಸಿದರು.

ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ, ದುಷ್ಟ ಭ್ರಷ್ಟ ಕಾಂಗ್ರೆಸ್ ಸರಕಾರದ ವಿರುದ್ಧ ವಿಧಾನಸೌಧದ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಪ್ರತಿಭಟನೆ ಮಾಡುತ್ತಿದ್ದೇವೆ. ಇದರಲ್ಲಿ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ನಾಯಕರಾದ ಸುರೇಶ್ ಬಾಬು, ಭೋಜೇಗೌಡರು ಸೇರಿ ಎರಡೂ ಪಕ್ಷಗಳ ಶಾಸಕರು, ವಿಧಾನಪರಿಷತ್ ಸದಸ್ಯರು ಎಲ್ಲರೂ ಇದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ಸಿನ ಗೂಂಡಾಗಳು ಸದನದಲ್ಲಿ ಮಾನ್ಯ ರಾಜ್ಯಪಾಲರ ಜೊತೆ ಗೂಂಡಾ ವರ್ತನೆ ತೋರಿದ್ದನ್ನು ದೇಶದ ಜನರು ನೋಡಿದ್ದಾರೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ ಕರ್ನಾಟಕವನ್ನು ಕುಡುಕರ ರಾಜ್ಯ ಮಾಡಲು ಮುಂದಾಗಿದೆ. ಇದನ್ನು ನಾನು ಪದೇಪದೇ ಹೇಳುತ್ತಿದ್ದೇನೆ. ಗ್ರಾಮೀಣ ಭಾಗದ ದಿನಸಿ ಅಂಗಡಿಯಲ್ಲಿ ಸಹ ಹೆಂಡ ಮಾರಾಟ ಮಾಡಲಾಗುತ್ತಿದೆ. ಸಿದ್ದರಾಮಯ್ಯನವರು ತಮ್ಮ ಬೊಕ್ಕಸಕ್ಕೆ ಹಣ ತುಂಬಿಸಿಕೊಳ್ಳಲು ಹಾಗೂ ಗ್ಯಾರಂಟಿಗಳಿಗಾಗಿ ಹಣ ತುಂಬಿಸಿಕೊಳ್ಳಲು ಕಳೆದ ಎರಡೂವರೆ ವರ್ಷಗಳಲ್ಲಿ ಶೇ 35 ರಷ್ಟು ಗುರಿ ಹೆಚ್ಚಿಸಿದ್ದಾರೆ. ಅಬಕಾರಿ ಇಲಾಖೆ ಅಧಿಕಾರಿಗಳು ಆ ಸ್ಥಾನಕ್ಕೆ ಬರಲು ಕೋಟಿ ಕೋಟಿ ಲಂಚ ಇರದೇ ಸಾಧ್ಯವಿಲ್ಲವಾಗಿದೆ ಎಂದು ಆರೋಪಿಸಿದರು.

ಇದೆಲ್ಲದರ ಪರಿಣಾಮವಾಗಿ ಗ್ರಾಮೀಣ ಭಾಗದ ದಿನಸಿ ಅಂಗಡಿಯಲ್ಲಿ ಸಹ ಹೆಂಡ ಮಾರಾಟಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಕ್ರಮವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿದ್ದಾರೆ. ಸರ್ಕಾರದ ಬೊಕ್ಕಸವನ್ನು ಈ ರೀತಿ ತುಂಬಿಸಿಕೊಳ್ಳಲು ಅವಕಾಶ ಮಾಡಿದ್ದಾರೆ. ಇಂಥ ನಾಚಿಕೆಗೇಡಿನ ಲಜ್ಜೆಗೆಟ್ಟ ಸರ್ಕಾರವನ್ನು ಕರ್ನಾಟಕವು ಇತಿಹಾಸದಲ್ಲಿ ಎಂದೂ ನೋಡಿರಲಿಲ್ಲ ಎಂದು ನುಡಿದರು.

ಜನರು ಇದಕ್ಕೆ ಶಾಪ ಹಾಕುತ್ತಿದ್ದಾರೆ. ಜನರ ಕಲ್ಯಾಣದ ಕುರಿತು ಚಿಂತನೆ ಮಾಡಬೇಕಾದ ಮುಖ್ಯಮಂತ್ರಿಗಳು ಇವತ್ತು ಗ್ಯಾರಂಟಿ, ಗ್ಯಾರಂಟಿ ಎಂದು ಹೇಳಿಕೊಂಡು ಗ್ರಾಮೀಣ ಭಾಗದ ಬಡ ಕುಟುಂಬದ ಜೀವನವನ್ನು ಹಾಳು ಮಾಡಲು ಮುಂದಾದುದು ದುರ್ದೈವ ಎಂದು ಟೀಕಿಸಿದರು. ನಾವು ಅನೇಕ ವಿಷಯಗಳನ್ನು ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದೇವೆ. ಅಬಕಾರಿ ಸಚಿವರ ರಾಜೀನಾಮೆ ಪಡೆಯಬೇಕು. ಅದರ ಕುರಿತು ಸೂಕ್ತವಾದ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ಸಿದ್ದರಾಮಯ್ಯನವರು ಮತ್ತು ಈ ಸರಕಾರದವರು ಮಾನ್ಯ ರಾಜ್ಯಪಾಲರನ್ನು ಜೀತದಾಳು ಎಂದು ತಿಳಿದುಕೊಂಡಿದ್ದಾರೆ. ಹಿಂದೆ ಇಂದಿರಾ ಗಾಂಧಿಯವರ ಆಡಳಿತಾವಧಿಯಲ್ಲಿ ಗೌರವಾನ್ವಿತ ರಾಜ್ಯಪಾಲರನ್ನು ಯಾವ ರೀತಿ ದುರುಪಯೋಗ ಮಾಡಿಕೊಂಡಿದ್ದರು ಎಂಬುದನ್ನು ದೇಶವೇ ನೋಡಿದೆ ಎಂದು ಗಮನ ಸೆಳೆದರು. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಇದ್ದಾಗ 90 ಬಾರಿ ರಾಷ್ಟ್ರಪತಿ ಆಡಳಿತ ಹೇರಲಾಗಿತ್ತು ಎಂದು ತಿಳಿಸಿದರು.
ಇದಲ್ಲದೇ ಮಾನ್ಯ ರಾಜ್ಯಪಾಲರಿಗೆ ಜಂಟಿ ಅಧಿವೇಶನದ ಸಂದರ್ಭದಲ್ಲಿ ಅಪಮಾನ ಮಾಡಿರುವುದು, ದುರ್ವರ್ತನೆ ತೋರಿದ್ದು, ಅಲ್ಲದೇ ಅವರು ಮಾಡಿದ್ದೇ ಸರಿ ಎಂದು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಇವತ್ತು ಮಾನ ಮರ್ಯಾದೆ ಬಿಟ್ಟು ಪಾದಯಾತ್ರೆ ಮಾಡಿ ಮುತ್ತಿಗೆ ಹಾಕುತ್ತಾರಂತೆ. ಯಾವ ಪುರುಷಾರ್ಥಕ್ಕಾಗಿ ಮುತ್ತಿಗೆ ಹಾಕುತ್ತೀರಿ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಸರಕಾರಕ್ಕೆ ಎರಡೂವರೆ ವರ್ಷಗಳಲ್ಲಿ ಯಾವುದೇ ಹೊಸ ಯೋಜನೆ ಘೋಷಣೆ ಮಾಡಿಲ್ಲ. ಅಭಿವೃದ್ಧಿ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದು ಆರೋಪಿಸಿದರು. ಭ್ರಷ್ಟಾಚಾರದಲ್ಲಿ ಮುಳುಗಿದ ಸಿದ್ದರಾಮಯ್ಯನವರ ಸರಕಾರ ಇಡೀ ವ್ಯವಸ್ಥೆಯನ್ನೇ ಹಾಳುಗೆಡವಿದೆ ಎಂದು ಟೀಕಿಸಿದರು.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮತ್ತು ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ, ಬಿಜೆಪಿ-ಜೆಡಿಎಸ್‍ನ ಶಾಸಕರು, ವಿಧಾನಪರಿಷತ್ ಸದಸ್ಯರು ಉಪಸ್ಥಿತರಿದ್ದರು

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8415 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment