Thursday, 29 October 2026 — Kannadavahini
BREAKING NEWS
Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ Uncategorized ನೂತನ ನೀರಾವರಿ ಯೋಜನೆಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್
ವಿದೇಶ

ರಷ್ಯಾ ಕಡಲ ತೀರದಲ್ಲಿ 7.4 ತೀವ್ರತೆಯ ಭೂಕಂಪನ: ಸುನಾಮಿ ಎಚ್ಚರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 3 ವೀಕ್ಷಣೆಗಳು
earthquack

ಮಾಸ್ಕೊ: ರಷ್ಯಾ ಪೂರ್ವದ ಕಮ್ಚಟ್ಕಾ ಕರಾವಳಿಯಲ್ಲಿ ಶನಿವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದ್ದು, ಒಂದು ತಿಂಗಳ ಅಂತರದಲ್ಲಿ ಸಂಭವಿಸಿದ ಎರಡನೇ ಪ್ರಬಲ ಭೂಕಂಪನ ಇದಾಗಿದೆ.

ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) . ರಷ್ಯಾದ ಕಮ್ಚಟ್ಕಾ ಪ್ರದೇಶದ ಆಡಳಿತ ಕೇಂದ್ರವಾದ ಪೆಟ್ರೋಪಾವ್ಲೋವ್ಸ್ಕ್-ಕಮ್ಚಟ್ಸ್ಕಿ ನಗರದಿಂದ ಪೂರ್ವಕ್ಕೆ 111 ಕಿಲೋಮೀಟರ್ (69 ಮೈಲು) ದೂರದಲ್ಲಿ 39.5 ಕಿಲೋಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ತಿಳಿಸಿದ್ದು,  ಪೆಸಿಫಿಕ್ ಸಾಗರದಲ್ಲಿ ಸುನಾಮಿ ಎಚ್ಚರಿಕೆ ನೀಡಿದೆ.

ರಿಕ್ಟರ್ ಮಾಪಕದಲ್ಲಿ 7.5 ತೀವ್ರತೆ ಭೂಕಂಪನ ದಾಖಲಾಗಿದ್ದು, ರಷ್ಯಾದ ಕೆಲವು ಹತ್ತಿರದ ಕರಾವಳಿಗಳಲ್ಲಿ ಒಂದು ಮೀಟರ್ (3.3 ಅಡಿ) ಎತ್ತರದ ಅಪಾಯಕಾರಿ ಅಲೆಗಳು ಏಳಬಹುದು ಎಂದು PTWC ಆರಂಭದಲ್ಲಿ ಎಚ್ಚರಿಸಿದೆ.

ಕಳೆದ ಜುಲೈನಲ್ಲಿ, ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿ ಭಾರೀ ಭೂಕಂಪ ಸಂಭವಿಸಿತ್ತು. ಇದು ಪೆಸಿಫಿಕ್‌ನಾದ್ಯಂತ ನಾಲ್ಕು ಮೀಟರ್ ಎತ್ತರದವರೆಗೆ ಸುನಾಮಿಯನ್ನು ಉಂಟುಮಾಡಿತು. ಅಲ್ಲದೇ ಅಮೆರಿಕ, ಜಪಾನ್ ಸೇರಿದಂತೆ ಹಲವು ರಾಷ್ಟ್ರಗಳಿಗೆ ಸುನಾಮಿ ತಲುಪಿತ್ತು.

2011 ರಲ್ಲಿ ಜಪಾನ್‌ನಲ್ಲಿ 9.1 ತೀವ್ರತೆಯ ಭೂಕಂಪನವು 15,000 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿತ್ತು. ಈ ಭೂಕಂಪದ ನಂತರ ದೊಡ್ಡ ಮಟ್ಟದಲ್ಲಿ 8.8 ತೀವ್ರತೆಯ ಭೂಕಂಪ ಕೂಡ ಸಂಭವಿಸಿತ್ತು. ಜುಲೈನಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಜಪಾನ್ ಅಧಿಕಾರಿಗಳು ಸುಮಾರು ಎರಡು ಮಿಲಿಯನ್ ಜನರು ಎತ್ತರದ ಪ್ರದೇಶಗಳಿಗೆ ಹೋಗುವಂತೆ ಹೇಳಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8392 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment