ಸರ್ಕಾರಿ ಶಾಲೆಯ ಮೇಲ್ಫಾವಣಿ ಕುಸಿದ ಪರಿಣಾಮ 7 ವಿದ್ಯಾರ್ಥಿಗಳು ಅಸುನೀಗಿದ್ದು, ಇಬ್ಬರು ವಿದ್ಯಾರ್ಥಿಗಳು ಜೀವನ್ಮರಣದ ನಡುವೆ ಹೋರಾಟ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ಸಂಭವಿಸಿದೆ.
ಝಲಾವರ್ ಜಿಲ್ಲೆಯ ಮನೋಹರ್ ಠಾಣಾ ಬಳಿಯ ಪಿಪ್ಲೊಡಿ ಸರ್ಕಾರಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ಈ ದುರಂತ ಸಂಭವಿಸಿದೆ.
ಶಾಲೆಯಲ್ಲಿ 60ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಾಲೆಯ ಸಿಬ್ಬಂದಿ ಕಟ್ಟಡದ ಒಳಗೆ ಇದ್ದಾಗ ದುರಂತ ಸಂಭವಿಸಿದೆ ಎಂದು ಹೇಳಳಾಗಿದೆ.
ಶಾಲೆ ಕಳಪೆ ಸ್ಥಿತಿಯಲ್ಲಿದ್ದು ಯಾವುದೇ ಸಮಯದಲ್ಲಿ ಕುಸಿಯಬಹುದು ಎಂದು ಪೋಷಕರು ದೂರು ನೀಡಿದ್ದರು. ಆದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಕಟ್ಟಡ ಶಿಥಿಲಾವಸ್ಥೆಯಲ್ಲಿ ಇದ್ದಿದ್ದರಿಂದ 8ನೇ ತರಗತಿ ವರೆಗೆ ಮಾತ್ರ ಪಾಠ ಮಾಡಲಾಗುತ್ತಿತ್ತು.
ಮೃತಪಟ್ಟ ಮಕ್ಕಳೆಲ್ಲರೂ 11 ವಯಸ್ಸಿನವರಾಗಿದ್ದಾರೆ. ಇಬ್ಬರ ಮಕ್ಕಳ ಸ್ಥಿತಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.



