ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಇಬ್ಬರು ಮಹಿಳೆಯರು ಸೇರಿದಂತೆ 8 ಮಂದಿ ಮೃತಪಟ್ಟು 7 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅಂಕಪಳ್ಳಿಯಲ್ಲಿ ಜರುಗಿದೆ.
ಭಾನುವಾರ ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಸಾವಿನ ಸಂಖ್ಯೆ ಏರುವ ಸಾಧ್ಯತೆ ಇದ್ದು, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಆಘಾತ ವ್ಯಕ್ತಪಡಿಸಿದ್ದಾರೆ.



