Wednesday, 28 October 2026 — Kannadavahini
BREAKING NEWS
ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ ಅಪರಾಧ ಮಡಿಕೇರಿಯಲ್ಲಿ 8 ಬೇಟೆಗಾರರ ಬಂಧನ ವಿದೇಶ ಸ್ಪೇನ್ ನಲ್ಲಿ ಭೀಕರ ರೈಲು ದುರಂತ: 64ಕ್ಕೆ ಏರಿದ ಸಾವಿನ ಸಂಖ್ಯೆ ಕ್ರೀಡೆ 3 ಬಾರಿ ಏಷ್ಯನ್‌ ಚಿನ್ನದ ಪದಕ ವಿಜೇತ ನೀರಜ್‌ ಯಾದವ್‌ ಶವವಾಗಿ ಪತ್ತೆ ರಾಜಕೀಯ ವಿಧಾನ ಪರಿಷತ್ತಿನ 4 ಕ್ಷೇತ್ರಗಳಿಗೆ ಮತದಾನ: 43 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ ಬೆಂಗಳೂರು ಬ್ಲೂ ಲೈನ್ ಮಟ್ರೋ ಕಾಮಗಾರಿ ಶೀಘ್ರ ಮುಗಿಸಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ ರಾಜ್ಯ ಖಾಸಗಿ ಆಸ್ಪತ್ರೆಗಳ ಸುಲಿಗೆಗೆ ಬ್ರೇಕ್: ನ.1ರಿಂದ ದರಪಟ್ಟಿ ಪ್ರದರ್ಶನ ಕಡ್ಡಾಯ ಅಪರಾಧ ಪತ್ನಿ ಕೊಂದು ರಾಜಕಾಲುವೆಗೆ ಎಸೆದು ಪರಾರಿಯಾಗಿದ್ದ ಪತಿ ಅರೆಸ್ಟ್ ರಾಜ್ಯ ಅ. 24ರಿಂದ ಹೊಸ ಮೆರುಗಿನಲ್ಲಿ ‘ಗೋಲ್ಡನ್ ಚಾರಿಯಟ್’ ಐಷಾರಾಮಿ ಯಾತ್ರೆ ಆರಂಭ
ಅಪರಾಧ

ಬೀದರ್ ನಲ್ಲಿ ಹಾಡುಹಗಲೇ ಗುಂಡು ಹಾರಿಸಿ 83 ಲಕ್ಷ ರೂ. ಎಟಿಎಂ ಹಣ ದರೋಡೆ: ಇಬ್ಬರು ಸಿಬ್ಬಂದಿ ಸಾವು

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 1 ವೀಕ್ಷಣೆಗಳು
bidar news
bidar news

ಎಟಿಎಎಂ ವಾಹನದ ಮೇಲೆ ಗುಂಡು ಹಾರಿಸಿ ಇಬ್ಬರನ್ನು ಹತ್ಯೆಗೈದ ದುಷ್ಕರ್ಮಿಗಳು ಹಾಡುಹಗಲೇ ಸುಮಾರು 83 ಲಕ್ಷ ರೂ. ಹಣ ದರೋಡೆ ಮಾಡಿದ ಆಘಾತಕಾರಿ ಘಟನೆ ಬೀದರ್ ನಲ್ಲಿ ನಡೆದಿದೆ.

ಗುರುವಾರ ಬೆಳಿಗ್ಗೆ ಶಿವಾಜಿ ರಾವ್ ವೃತ್ತದ ಬಳಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಎಟಿಎಂ ವಾಹನದ ಸಿಬ್ಬಂದಿ ಮೇಲೆ 5 ಸುತ್ತು ಗುಂಡು ಹಾರಿಸಿದ್ದಾರೆ. ಇದರಲ್ಲಿ ಗಿರಿ ವೆಂಕಟೇಶ್ ಎಂಬುವವರು ಸ್ಥಳದಲ್ಲೇ ಮೃತಪಟ್ಟರೆ, ಗಂಭೀರವಾಗಿ ಗಾಯಗೊಂಡಿದ್ದ ಮತ್ತೊಬ್ಬ ಸಿಬ್ಬಂದಿ ಶಿವಕುಮಾರ್ (26) ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.

ಬೀದರ್ ನ ಎಸ್‌ಬಿಐ ಬ್ಯಾಂಕ್ ಕಚೇರಿಯ ಎಟಿಎಂಗೆ ಹಣ ಹಾಕಲು ಏಜೆನ್ಸಿಯ ಸಿಬ್ಬಂದಿ ವಾಹನದಲ್ಲಿ ಬಂದಿದ್ದಾಗ ಇಬ್ಬರು ದುಷ್ಕರ್ಮಿಗಳು ಬಂದು ಗುಂಡು ಹಾರಿಸಿದ್ದಾರೆ. ಬಳಿಕ ಉಳಿದ ಸಿಬ್ಬಂದಿ ಮೇಲೆ ಕಣ್ಣಿಗೆ ಖಾರದ ಪುಡಿ ಎರಚಿ ಹಣವನ್ನು ಖದೀಮರು ದ್ದೊಯ್ದಿದ್ದಾರೆ.

ದುಷ್ಕರ್ಮಿಗಳು 5 ಸುತ್ತಿನ ಗುಂಡಿನ ದಾಳಿ ನಡೆದ ಬಳಿಕ ಹಣ ತೆಗೆದುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ತನಿಖೆ ಆರಂಭಿಸಿರುವ ಬೀದರ್ ಪೊಲೀಸರು ಎಟಿಎಂ ವಾಹನದಲ್ಲಿ 87 ಲಕ್ಷ ರೂ. ಇತ್ತು. ದರೋಡೆಕೋರರು 83 ಲಕ್ಷ ರೂ. ಕದ್ದೊಯ್ದಿದ್ದಾರೆ ಎಂದು ಅಂದಾಜಿಸಲಾಗಿದೆ. ಸ್ಥಳದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗಿದ್ದು, ಶೀಘ್ರದಲ್ಲೇ ದುಷ್ಕರ್ಮಿಗಳನ್ನು ಬಂಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8391 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment