ರಷ್ಯಾ ಸೇನೆಯಿಂದ ಇದುವರಿಗೆ 85 ಭಾರತೀಯರನ್ನು ಬಿಡುಗಡೆ ಮಾಡಲಾಗಿದ್ದು, ಇನ್ನೂ 20 ಮಂದಿಯನ್ನು ಶೀಘ್ರ ಬಿಡುಗಡೆ ಮಾಡಲಿದೆ.
ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕ್ರಂ ಮಿಸ್ರಿ ಈ ವಿಷಯ ತಿಳಿಸಿದ್ದು, ಹಣದಾಸೆಗಾಗಿ ರಷ್ಯಾ ಸೇನೆಗೆ ಸೇರಿದ್ದ ಭಾರತೀಯರನ್ನು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಬಳಸಲಾಗುತ್ತಿತ್ತು.
ರಷ್ಯಾ ಸೇನೆಯಲ್ಲಿ ಸಿಲುಕಿದ್ದಾರೆ ಎಂಬ ವರದಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇತ್ತೀಚೆಗೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ವೇಳೆ ಭಾರತೀಯರ ಬಿಡುಗಡೆಗೆ ಆಗ್ರಹಿಸಿದ್ದರು.
ಇಂದು ಆರಂಭಗೊಳ್ಳಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಕೂಡ ಪ್ರಧಾನಿ ಭಾರತೀಯರನ್ನು ಅಕ್ರಮವಾಗಿ ಸೇನೆಯಲ್ಲಿ ಬಳಕೆ ಮಾಡುತ್ತಿರುವ ಬಗ್ಗೆ ಪ್ರಸ್ತಾಪಿಸಲಿದ್ದು, ಇನ್ನೂ 20 ಭಾರತೀಯರ ಬಿಡುಗಡೆ ಆಗಲಿದೆ ಎಂದು ಅವರು ತಿಳಿಸಿದರು.
ಇದುವರೆಗೆ ರಷ್ಯಾ ಸೇನೆ 85 ಭಾರತೀಯರನ್ನು ಬಿಡುಗಡೆ ಮಾಡಿದೆ. ಉಕ್ರೇನ್ ವಿರುದ್ಧದ ಯುದ್ಧದಲ್ಲೂ ಕೆಲವು ಭಾರತೀಯರು ಮೃತಪಟ್ಟಿದ್ದಾರೆ. ಪ್ರಸ್ತುತ ಇನ್ನೂ 20 ಮಂದಿ ಸೇವೆ ಸಲ್ಲಿಸುತ್ತಿರುವ ಮಾಹಿತಿ ಇದ್ದು, ಅವರ ಬಿಡುಗಡೆಗೆ ಒತ್ತಡ ಹೇರಲಾಗಿದೆ ಎಂದು ಅವರು ವಿವರಿಸಿದರು.