ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ 88 ಸ್ಥಳಗಳು ಅಪಾಯದ ಸ್ಥಿತಿಯಲ್ಲಿವೆ ಎಂದು ಜಿಯೋಲಾಜಿಕಲ್ ಸರ್ವೇ ತಂಡ ವರದಿ ನೀಡಿದೆ.
ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ ಸುಮಾರು ಒಂದು ವಾರಗಳ ಸರ್ವೆ ನಡೆಸಿದ ಜಿಯೋಲಾಜಿಕಲ್ ಸರ್ವೇ ತಂಡ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ಹಸ್ತಾಂತರಿಸಿದೆ.
ಶೇ.80ರಷ್ಟು ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಭೂ ಕುಸಿತಗಳು ಸಂಭವಿಸುತ್ತಿವೆ. ಅದರಲ್ಲೂ ಪ್ರವಾಸಿಗರ ನೆಚ್ಚಿನ ತಾಣವಾದ ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತದ ಸಾಲು, ಚಾರ್ಮಾಡಿ ಘಾಟ್ ಅಪಾಯಕಾರಿ ಸ್ಥಿತಿಯಲ್ಲಿವೆ ಎಂದು ವರದಿ ವಿವರಿಸಿದೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಎನ್.ಆರ್.ಪುರ ತಾಲೂಕಿನ ಬನ್ನೂರು ಗ್ರಾ.ಪಂ. ವ್ಯಾಪ್ತಿಯ ಜಕನಕ್ಕಿ ಗ್ರಾಮದ ಬಳಿ ಭೂಕುಸಿತ ಸಂಭವಿಸಿದೆ. ಸಂಪೂರ್ಣ ರಸ್ತೆ ಕುಸಿಯುವ ಆತಂಕದಲ್ಲಿವ ಸ್ಥಳೀಯರಿದ್ದಾರೆ.