Friday, September 20, 2024
Google search engine
HomeಅಪರಾಧSHOCKING ದೇಶದಲ್ಲಿ ಜನನ ಪ್ರಮಾಣಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚು!

SHOCKING ದೇಶದಲ್ಲಿ ಜನನ ಪ್ರಮಾಣಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚು!

ಭಾರತದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಜನನ ಪ್ರಮಾಣಕ್ಕಿಂತ ಹೆಚ್ಚು ಎಂದು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (NCRB) ಆತಂಕಕಾರಿ ದಾಖಲೆ ಬಿಡುಗಡೆ ಮಾಡಿದೆ.

ದೆಹಲಿಯಲ್ಲಿ ಬುಧವಾರ ನಡೆದ ವಾರ್ಷಿಕ ಐಸಿ3 ಸಮ್ಮೇಳನ ಮತ್ತು ಎಕ್ಸ್ ಪೊ 2024ನಲ್ಲಿ ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ ಈ `ಭಾರತದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ ಎಂಬ ಸಾಂಕ್ರಾಮಿಕ’ ವಿಷಯದಲ್ಲಿ ವರದಿ ಮಂಡಿಸಿದೆ.

ಭಾರತದಲ್ಲಿ ವಾರ್ಷಿಕ ಒಟ್ಟಾರೆ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಶೇ.2ರಷ್ಟು ಹೆಚ್ಚಾಗಿದ್ದರೆ, ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಶೇ.4ರಷ್ಟು ಹೆಚ್ಚಾಗಿದೆ. ಕಳೆದೆರಡು ವರ್ಷಗಳಲ್ಲಿ ಅಂದರೆ 2022ರಿಂದ 2024ರ ಅವಧಿಯಲ್ಲಿ ರಾಷ್ಟ್ರೀಯ ಸರಾಸರಿ ಆತ್ಮಹತ್ಯೆ ಪ್ರಮಾಣಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಶೇ.4ರಷ್ಟು ಏರಿಕೆಯಾಗಿದೆ.

2022ರಲ್ಲಿ ಒಟ್ಟಾರೆ ವಿದ್ಯಾರ್ಥಿಗಳ ಆತ್ಮಹತ್ಯೆಯಲ್ಲಿ ಶೇ.53ರಷ್ಟು ಪುರುಷ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರೆ, 2021 ಮತ್ತು 2022 ರ ನಡುವೆ, ಪುರುಷರು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಶೇ.6 ರಷ್ಟು ಕಡಿಮೆಗಿದೆ. ಆದರೆ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಮಾಣ ಶೇ.7ರಷ್ಟು ಹೆಚ್ಚಾಗಿದೆ ಎಂದು ವರದಿ ವಿವರಿಸಿದೆ.

ವಿದ್ಯಾರ್ಥಿಗಳ ಆತ್ಮಹತ್ಯೆಯ ಪ್ರಮಾಣವು ಜನಸಂಖ್ಯೆಯ ಬೆಳವಣಿಗೆಯ ದರಕ್ಕಿಂತ ಹೆಚ್ಚಾಗಿರುವುದು ಮತ್ತೊಂದು ಆತಂಕಕಾರಿ ವಿಷಯವಾಗಿದೆ. ಕಳೆದ 10 ವರ್ಷದಲ್ಲಿ 24 ವರ್ಷ ವಯಸ್ಸಿನವರೆಗೆ ಜನಸಂಖ್ಯೆಯು 582 ದಶಲಕ್ಷದಿಂದ 581 ದಶಲಕ್ಷಕ್ಕೆ ಕಡಿಮೆಯಾಗಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳ ಸಂಖ್ಯೆ 6,654 ರಿಂದ 13,044ಕ್ಕೆ ಏರಿಕೆಯಾಗಿದೆ.

ರಾಜ್ಯಗಳಿಗೆ ಹೋಲಿಸಿದರೆ ಮಹಾರಾಷ್ಟ್ರ, ತಮಿಳುನಾಡು ಮತ್ತು ಮಧ್ಯಪ್ರದೇಶಗಳಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ. ಅಂದರೆ ಈ ರಾಜ್ಯಗಳ ಆತ್ಮಹತ್ಯೆ ಪ್ರಕರಣಗಳು ಒಟ್ಟಾರೆ ದೇಶದ ಪ್ರಕರಣಗಳ ಮೂರನೇ ಒಂದು ಭಾಗದಷ್ಟಾಗಿದೆ.

ದಕ್ಷಿಣ ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟಾರೆ ಶೇ.29ರಷ್ಟು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ದಾಖಲಾಗಿವೆ. ಹೆಚ್ಚಿನ ಶೈಕ್ಷಣಿಕ ವಾತಾವರಣಕ್ಕೆ ಹೆಸರುವಾಸಿಯಾದ ರಾಜಸ್ಥಾನದಲ್ಲಿ 10ನೇ ಸ್ಥಾನದಲ್ಲಿದೆ. ಕೋಟಾದಂತಹ ಕೋಚಿಂಗ್ ಹಬ್‌ಗಳಿಗೆ ಆತ್ಮಹತ್ಯೆ ಪ್ರಕರಣ ಹೆಚ್ಚಾಗಿವೆ. ಕಳೆದ 5 ವರ್ಷಗಳಲ್ಲಿ ಲಿಂಗಾನುಪಾತದ ಪ್ರಕಾರ ಸರಾಸರಿ ವಾರ್ಷಿಕ ಶೇ.5 ಆತ್ಮಹತ್ಯೆ ಪ್ರಕರಣ ಹೆಚ್ಚಾಗಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments