ಕಾಂಗ್ರೆಸ್ ಯಾವಾಗಲೂ ಬ್ಲಾಕ್ ಮನಿ ಮೇಲೆ ರಾಜಕಾರಣ ಮಾಡುತ್ತದೆ. ಸುಮಾರು 600 ಕೋಟಿ ರೂ.ತೆರಿಗೆ ವಂಚನೆ ಮಾಡಿದೆ. ಅದನ್ನು ಪ್ರಶ್ನೆ ಮಾಡಬಾರದೇ, ಅದಕ್ಕೂ ಚುನಾವಣೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಗದಗನಲ್ಲಿ ಇಂದು ಜೆಡಿಎಸ್ ಜಿಲ್ಲಾ ಕಚೇರಿಗೆ ಭೇಟಿ ನೀಡಿ ಜೆಡಿಎಸ್ ಮುಖಂಡರ ಜೊತೆ ಸಭೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಸಿಎಂ ಸಿದ್ದರಾಮಯ್ಯ ಅವರು ದೇವೇಗೌಡರಿಗೆ ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಪ್ರಶ್ನಿಸಿದ್ದರು. ಆ ಹಿನ್ನೆಲೆಯಲ್ಲಿ ದೇವೇಗೌಡರು ಅವರ ಗರ್ವಭಂಗವಾಗಬೇಕಿ ಅಂತ ಹೇಳಿಕೆ ಕೊಟ್ಟಿದ್ದಾರೆ. ನಾವು ಕಾಂಗ್ರೆಸ್ ವಿರುದ್ದ ಮೈತ್ರಿ ಮಾಡಿಕೊಂಡಿದ್ದೇವೆ. ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕರು, ಹೀಗಾಗಿ ಅವರ ವಿರುದ್ದ ನಮ್ಮ ಹೋರಾಟ ಇದ್ದೇ ಇರುತ್ತದೆ ಎಂದರು.
ಇದೇ ವೇಳೆ ದಾವಣಗೆರೆ ಬಿಜೆಪಿ ಮಹಿಳಾ ಅಭ್ಯರ್ಥಿ ಕುರಿತು ಶಾಸಕ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಯಾವುದೇ ಪಕ್ಷದ ಅಭ್ಯರ್ಥಿ ಇರಲಿ ಮಹಿಳೆಯರ ಬಗ್ಗೆ ಮಾತನಾಡುವುದು ಸರಿಯಲ್ಲ. ಮಹಿಳೆಯರಿಗೆ ಅವಮಾನ ಮಾಡಿದಂತಾಗುತ್ತದೆ. ಅದಕ್ಕೆ ಸಹಜವಾಗಿ ವಿರೋಧ ವ್ಯಕ್ತವಾಗುತ್ತದೆ ಎಂದು ಹೇಳಿದರು.
ಜೆಡಿಎಸ್ ಶಾಲ್ ಹಾಕಿಕೊಂಡಿರುವುದಕ್ಕೆ ಏನು ಅನಿಸುತ್ತಿದೆ ಎಂದು ಕೇಳಿದ ಪ್ರಶ್ನೆಗೆ ಜವಾಬ್ದಾರಿ ಡಬಲ್ ಆಗಿದೆ ಎಂದು ಹೇಳಿದರು.