ನಟ ದರ್ಶನ್ ಗೆ ನ್ಯಾಯಾಂಗ ಬಂಧನ ಅವಧಿಯನ್ನು ಮೂರು ದಿನಗಳಿಗೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ.
ಬೆಂಗಳೂರಿನ 24ನೇ ಎಎಂಎಂಸಿ ನ್ಯಾಯಾಲಯ ಸೆಪ್ಡೆಂಬರ್ 12ರವರೆಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ.
ಕಳೆದೆರಡು ತಿಂಗಳಿಂದ ಜೈಲಿನಲ್ಲಿರುವ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಇತ್ತೀಚೆಗೆ ಸ್ಥಳಾಂತರಿಸಲಾಗಿದ್ದು, ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ದರ್ಶನ್ ಅವರನ್ನು ಹಾಜರುಪಡಿಸಲಾಗಿದೆ.
ಇದೇ ವೇಳೆ ದರ್ಶನ್ ತಮ್ಮ ವಿರುದ್ಧದ ಪ್ರಕರಣದಲ್ಲಿ ಮಾಧ್ಯಮಗಳ ವರದಿಗೆ ತಡೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.