ವಿವಿಧ ಹಗರಣಗಳ ಪ್ರಗತಿ ಪರಿಶೀಲನೆಗಾಗಿ ತನಿಖಾ ಸಂಸ್ಥೆಗಳ ಜೊತೆ ಸಮನ್ವಯತೆ ಸಾಧಿಸಲು ರಾಜ್ಯ ಸರ್ಕಾರ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಮಿತಿ ರಚಿಸಿದೆ.
ರಾಜ್ಯ ಸರ್ಕಾರ ಮಂಗಳವಾರ ಈ ಆದೇಶ ಹೊರಡಿಸಿದ್ದು, ಗೃಹ ಸಚಿವ ಜಿ.ಪರಮೇಶ್ವರ್ ಅಧ್ಯಕ್ಷತೆಯ ಸಮನ್ವಯ ಸಮಿತಿ ಸಭೆಯಲ್ಲಿ ಕಾನೂನು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಕೃಷಿ ಸಚಿವ ಕೃಷ್ಣ ಭೈರೇಗೌಡ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ.
ಸಮಿತಿಯು ತನಿಖಾ ಸಂಸ್ಥೆಗಳು ನಡೆಸುತ್ತಿರುವ ಹಗರಣಗಳ ಕುರಿತು ಸಮಗ್ರ ಮಾಹಿತಿ ಪಡೆದು 2 ತಿಂಗಳಲ್ಲಿ ಪೂರ್ಣ ವಿವರ ನೀಡುವಂತೆ ಸೂಚಿಸಲಾಗಿದೆ.