Thursday, September 19, 2024
Google search engine
Homeಅಪರಾಧಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ದಾಳಿ: 18 ಮೊಬೈಲ್, ಡ್ರಗ್ಸ್ ವಶಕ್ಕೆ

ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ದಾಳಿ: 18 ಮೊಬೈಲ್, ಡ್ರಗ್ಸ್ ವಶಕ್ಕೆ

ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪದ ನಂತರ ಇದೇ ಮೊದಲ ಬಾರಿ ಸಿಸಿಬಿ ಪೊಲೀಸರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಶನಿವಾರ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಶನಿವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದ ಸಿಸಿಬಿ ಪೊಲೀಸರು ದರ್ಶನ್ ಜೊತೆ ಫೋಟೊ ತೆಗೆಸಿಕೊಂಡಿದ್ದ ರೌಡಿ ಶೀಟರ್ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ ಇತರರ ಬಳಿ ಇದ್ದ 18 ಮೊಬೈಲ್, ಡ್ರಗ್ಸ್ ಮತ್ತು ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.

ರೌಡಿಶೀಟರ್ ವಿಲ್ಸನ್‌ಗಾರ್ಡನ್ ನಾಗ ಜೈಲಿನಿಂದಲೇ ಧಮ್ಕಿ ಹಾಕುತ್ತಿದ್ದ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶನಿವಾರ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದಾರೆ. ತಪಾಸಣೆ ವೇಳೆ ವಿಲ್ಸನ್‌ ಗಾರ್ಡನ್‌ ನಾಗ ಮತ್ತು ಆತನ ಸಹಚರರ ಸುಮಾರು 18 ಮೊಬೈಲ್‌ಫೋನ್‌ ವಶಕ್ಕೆ ಪಡೆದಿದ್ದಾರೆ.

ಆಗಸ್ಟ್​​​ 24 ರಂದು ಸಿಸಿಬಿ ಅಧಿಕಾರಿಗಳು ಬೆಂಗಳೂರು ಕೇಂದ್ರ ಕಾರಾಗೃಹದ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಏನು ಸಿಗದೆ ಖಾಲಿ ಕೈಯಲ್ಲಿ ಅಧಿಕಾರಿಗಳು ಬರೀಗೈಯಲ್ಲಿ ಮರಳಿದ್ದರು. ದಾಳಿ ಮಾಡಿದ ಮರು ದಿನವೇ (ಆ.25) ರಂದು ಕೊಲೆ ಆರೋಪಿ ದರ್ಶನ್​ ಜೈಲಿನಲ್ಲಿ ಬಲಗೈಯಲ್ಲಿ ಚಹಾ ಮಗ್​ ಮತ್ತು ಎಡಗೈನಲ್ಲಿ ಸಿಗರೇಟ್​ ಹಿಡಿದಿರುವ ಫೋಟೋ ವೈರಲ್​ ಆಗಿತ್ತು.

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ಅಧಿಕಾರಿಗಳ ದಾಳಿಯ ಮಾಹಿತಿ ಸೋರಿಕೆಯಾಗಿದೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಆಂತರಿಕ ತನಿಖೆ ನಡೆಸುವಂತೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಸೂಚನೆ ನೀಡಿದ್ದರು.

​ರಾಜಾತಿಥ್ಯ ನೀಡಿರುವ ಫೋಟೋ ವೈರಲ್​ ಆದ ನಂತರ ಜೈಲು ಅಧಿಕಾರಿಗಳು ಆರೋಪಿ ದರ್ಶನ್​ನನ್ನು ಬಳ್ಳಾರಿ ಜೈಲಿಗೆ ಶೀಫ್ಟ್​ ಮಾಡಿದ್ದಾರೆ. ಇನ್ನು, ದರ್ಶನ್​ ಸಹಚರರನ್ನು ಕಲಬುರಗಿ, ವಿಜಯಪುರ ಸೇರಿದಂತೆ ವಿವಿಧ ಕೇಂದ್ರ ಕಾರಾಗೃಹಗಳಿಗೆ ಶಿಫ್ಟ್​​ ಮಾಡಲಾಗಿದೆ. ಸದ್ಯ ದರ್ಶನ್​ ಬಳ್ಳಾರಿ ಜೈಲಿನಲ್ಲಿದ್ದು, ಜಾಮೀನು ನಿರೀಕ್ಷೆಯಲ್ಲಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments