2013-18ರ ಅವಧಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ 13,000 ಶಿಕ್ಷಕರು ಸೇರಿದಂತೆ 30,000 ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಒಂದು ವರ್ಷದ ಅವಧಿಯಲ್ಲಿ 6500 ಶಿಕ್ಷಕರು ಸೇರಿದಂತೆ 15000 ಖಾಲಿ ಹುದ್ದೆ ತುಂಬಲಾಗುವುದು. ನಂತರ 2 ವರ್ಷದ ಅವಧಿಯಲ್ಲಿ 25,000 ಹುದ್ದೆ ತುಂಬಲಾಗುವುದು ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರದ ಅವಧಿ ಮುಗಿಯುವುರೊಳಗೆ 50,000 ಖಾಲಿ ಹುದ್ದೆ ಭರ್ತಿ ಮಾಡಲಾಗುವುದು ಹಾಗೂ ವಾರ್ಷಿಕ 5000 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಅವರು ವಿವರಿಸಿದರು.
ಬಿಜೆಪಿಯವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರು ಸಕರಾತ್ಮಕ ರಾಜಕೀಯ ಮಾಡದೆ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಮತ್ತು ಸತ್ಯಕ್ಕೆ ಸಂಬಂಧವೇ ಇಲ್ಲ ಎಂದು ಪಾಟೀಲ್ ನಾಗಮಂಗಲ ಗಣೇಶ ವಿಸರ್ಜನೆ ವೇಳೆ ನಡೆದ ಘಟನೆಗೆ ಪ್ರತಿಕ್ರಿಯಿಸಿದರು.