ಅದ್ಭುತ ಪ್ರದರ್ಶನ ನೀಡಿದ ಭಾರತ ತಂಡ 4-1 ಗೋಲುಗಳಿಂದ ಕೊರಿಯಾ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾವಳಿಯಲ್ಲಿ ಫೈನಲ್ ಪ್ರವೇಶಿಸಿದೆ.
ಚೀನಾದ ಹುಲುಬ್ ಬೀರ್ ಸೋಮವಾರ ನಡೆದ ಸೆಮಿಫೈನಲ್ ನಲ್ಲಿ ಸುಲಭ ಜಯ ಸಾಧಿಸಿದ ಭಾರತ ತಂಡ ಫೈನಲ್ ನಲ್ಲಿ ಆತಿಥೇಯ ಚೀನಾ ತಂಡವನ್ನು ಎದುರಿಸಲಿದೆ.
ಭಾರತ ತಂಡದ ಗೆಲುವಿನಲ್ಲಿ ನಾಯಕ ಹರ್ಮನ್ ಪ್ರೀತ್ ಸಿಂಗ್ ಪೆನಾಲ್ಟಿಯಲ್ಲಿ 2 ಗೋಲು ಬಾರಿಸಿ ಗಮನ ಸೆಳೆದರು. ಉತ್ತಮ್ ಸಿಂಗ್ ಮತ್ತು ಜರ್ಮನ್ ಪ್ರೀತ್ ತಲಾ ಒಂದು ಗೋಲು ಗಳಿಸಿದರು. ಕೊರಿಯಾ ಭಾರತದ ಪರ ಕೇವಲ ಒಂದು ಗೋಲು ಗಳಿಸಲಷ್ಟೇ ಶಕ್ತವಾಯಿತು.
ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುತ್ತಿರುವ ಭಾರತ ತಂಡ ಸೋಲರಿಯದ ತಂಡವಾಗಿ ಫೈನಲ್ ಪ್ರವೇಶಿಸಿದೆ. ಲೀಗ್ ಕೊನೆಯ ಪಂದ್ಯದಲ್ಲಿ ಭಾರತ ಪಾಕಿಸ್ತಾನ ವಿರುದ್ಧ ಸುಲಭ ಗೆಲುವು ದಾಖಲಿಸಿತ್ತು.