Friday, November 22, 2024
Google search engine
Homeತಾಜಾ ಸುದ್ದಿನಾಳೆ ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ತೀರ್ಮಾನ: ಸಿಎಂ ಸಿದ್ದರಾಮಯ್ಯ

ನಾಳೆ ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿಮುಖ್ಯಮಂತ್ರಿ ಧರಂಸಿಂಗ್ ಶ್ರಮವಹಿಸಿದ್ದರು. 2013ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತರು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದರು.

ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

ಮಂಡ್ಯ ಜಿಲ್ಲೆಯ ನಾಗಮಂಗಲದ ಗಲಭೆ ಪ್ರಕರಣದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ, ನಾಗಮಂಗಲ ಶಾಂತವಾಗಿದೆ. ಗಲಭೆ ಪ್ರಕರಣಕ್ಕೆ ಪೊಲೀಸರ ಕರ್ತವ್ಯ ವೈಫಲ್ಯವ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಸಂಬಂಧಪಟ್ಟ ಉಪಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇನ್ಸ್ ಪೆಕ್ಟರ್ ನ್ನು ಅಮಾನತ್ತುಗೊಳಿಸಲಾಗಿದೆ. ಈ ಪ್ರಕರಣದಲ್ಲಿ ಹಾನಿಗೊಳಗಾದ ಅಂಗಡಿ ಮುಂಗಟ್ಟ, ವಾಹನಗಳಿಗೆ ಪರಿಹಾರ ನೀಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments