Saturday, November 9, 2024
Google search engine
Homeಕಾನೂನುಬಿಜೆಪಿ ಶಾಸಕ ಮುನಿರತ್ನಗೆ ಜೈಲೇ ಗತಿ: ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್!

ಬಿಜೆಪಿ ಶಾಸಕ ಮುನಿರತ್ನಗೆ ಜೈಲೇ ಗತಿ: ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್!

ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ನ್ಯಾಯಾಂಗ ಬಂಧನ ವಿಧಿಸಿರುವ ನ್ಯಾಯಾಲಯ ವಿಚಾರಣೆಯನ್ನು ನಾಳೆಗೆ (ಸೆಪ್ಟೆಂಬರ್ 18) ಮುಂದೂಡಿ ಮಂಗಳವಾರ ಆದೇಶ ಹೊರಡಿಸಿದೆ.

ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ವಾದ ಮಂಡಿಸಿದರು. ಲಂಚ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣ ಸಂಬಂಧ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಎಂಬಲ್ಲಿ ವೈಯ್ಯಾಲಿಕಾವಲ್‌ ಪೊಲೀಸರು ಶನಿವಾರ ಬಂಧಿಸಿದ್ದರು.

ಬಂಧನಕ್ಕೊಳಗಾಗಿದ್ದ ಮುನಿರತ್ನರನ್ನು ಎರಡು ದಿನ ಪೊಲೀಸರ ವಶಕ್ಕೆ ನೀಡಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಭಾನುವಾರ ಆದೇಶಿಸಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments