Friday, August 14, 2026
Google search engine
Homeತಾಜಾ ಸುದ್ದಿಮೊದಲ ಬಾರಿ ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್!

ಮೊದಲ ಬಾರಿ ಜಾಮೀನು ಅರ್ಜಿ ಸಲ್ಲಿಸಿದ ದರ್ಶನ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 100ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದಿರುವ ನಟ ದರ್ಶನ್ ಮೊದಲ ಬಾರಿ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿರುವುದರಿದ ದರ್ಶನ್ ಪರ ವಕೀಲರು ಬೆಂಗಳೂರು ಸೆಷನ್ಸ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಚಾರ್ಜ್ ಶೀಟ್ ಸಲ್ಲಿಕೆ ಆಗಿರುವುದರಿಂದ ತನಿಖೆ ಮುಗಿದಿದೆ. ಇದರಿಂದ ಸಾಕ್ಷ್ಯ ನಾಶ ಅಥವಾ ತನಿಖೆಗೆ ಅಡ್ಡಿಪಡಿಸುವ ಸಾಧ್ಯತೆ ಇಲ್ಲದೇ ಇರುವುದರಿಂದ ಜಾಮೀನು ನೀಡಬೇಕು ಎಂದು ಕಾರಣ ನೀಡಿ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಲಾಗಿದ್ದು, ಅರ್ಜಿ ವಿಚಾರಣೆ ಸೋಮವಾರದ ನಂತರ ನಡೆಯುವ ಸಾಧ್ಯತೆ ಇದೆ. ದರ್ಶನ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸುವ ಸಾಧ್ಯತೆ ಇದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments