ಪ್ರಧಾನಿ ನರೇಂದ್ರ ಮೋದಿ ಮೂರು ದಿನಗಳ ಅಮೆರಿಕ ಪ್ರವಾಸಕ್ಕಾಗಿ ಶನಿವಾರ ಬೆಳಿಗ್ಗೆ ಪ್ರಯಾಣ ಆರಂಭಿಸಿದ್ದಾರೆ.
ವಿಶ್ವಸಂಸ್ಥೆ ಅಧಿವೇಶನದಲ್ಲಿ ಭಾಷಣ ಹಾಗೂ ಕ್ವಾಡ್ ಶೃಂಗಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿ 3 ದಿನಗಳ ಅಮೆರಿಕ ಪ್ರವಾಸದಲ್ಲಿ ಪಾಲ್ಗೊಳ್ಳಲಿದ್ದಾರೆ.
ಅಮೆರಿಕದ ಪ್ರವಾಸದ ವೇಳೆ ರಷ್ಯಾ-ಉಕ್ರೇನ್ ನಡುವಿನ ಯುದ್ಧ ಹಾಗೂ ಇಸ್ರೇಲ್ ಮತ್ತು ಹೆಜಾಬುಲ್ಲಾ ನಡುವಿನ ಯುದ್ಧಗಳಿಂದ ಜಾಗತಿಕ ವ್ಯವಹಾರಗಳ ಮೇಲೆ ಆಗುತ್ತಿರುವ ಪರಿಣಾಮಗಳ ಕುರಿತು ಅಮೆರಿಕ, ಜಪಾನ್ ಸೇರಿದಂತೆ ವಿವಿಧ ರಾಷ್ಟ್ರಗಳ ಮುಖಂಡರ ಜೊತೆ ಪ್ರಧಾನಿ ಮೋದಿ ಚರ್ಚೆ ನಡೆಸಲಿದ್ದಾರೆ.
ಭಾನುವಾರ ಸಂಜೆ ಫಿಲಿಡೆಲ್ಪಿಯಾದಲ್ಲಿ ಇಳಿಯಲಿರುವ ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಜೋ ಬಿಡೈನ್ ಅವರನ್ನು ಭೇಟಿ ಮಾಡಿ ದ್ವೀಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಧ್ಯಕ್ಷೀಯ ಚುನಾವಣೆ ಹಿನ್ನೆಲೆಯಲ್ಲಿ ಇಬ್ಬರ ಭೇಟಿ ಮಹತ್ವ ಪಡೆದಿದೆ.
ಮತ್ತೊಂದೆಡೆ ಅಧ್ಯಕ್ಷೀಯ ಚುನಾವಣೆಯ ಸ್ಪರ್ಧಿ ಹಾಗೂ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿಯನ್ನು ಭೇಟಿ ಮಾಡಲಿದ್ದೇನೆ ಎಂದು ಹೇಳಿಕೆ ನೀಡಿದ್ದರೂ ಬಿಡುವಿಲ್ಲದ ವೇಳಾಪಟ್ಟಿ ಇರುವುದರಿಂದ ಭೇಟಿ ಬಗ್ಗೆ ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಹೇಳಿದೆ.