Saturday, September 21, 2024
Google search engine
Homeತಾಜಾ ಸುದ್ದಿತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ರಾಜ್ಯದ ಎಲ್ಲಾ ದೇವಾಸ್ಥಾನಗಳ ಪ್ರಸಾದ ಪರೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ!

ತಿರುಪತಿ ಲಡ್ಡು ವಿವಾದ ಬೆನ್ನಲ್ಲೇ ರಾಜ್ಯದ ಎಲ್ಲಾ ದೇವಾಸ್ಥಾನಗಳ ಪ್ರಸಾದ ಪರೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ!

ತಿರುಪತಿ ಲಡ್ಡುನಲ್ಲಿ ಪ್ರಾಣಿ ಕೊಬ್ಬು ಇರುವುದು ಲ್ಯಾಬ್ ಪರೀಕ್ಷೆಯಲ್ಲಿ ದೃಢಪಟ್ಟ ಬೆನ್ನಲ್ಲೇ ರಾಜ್ಯ ಸರಕಾರ ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ನೀಡಲಾಗುವ ಪ್ರಸಾದವನ್ನು ಪರೀಕ್ಷೆಗೊಳಪಡಿಸಲು ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ದೇವಸ್ಥಾನಗಳಲ್ಲಿ ಬಳಸಲಾಗುವ ತುಪ್ಪದ ಬಗ್ಗೆ ಪರಿಶೀಲನೆ ನಡೆಯಲಿದೆ. ಈಗಾಗಲೇ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ನಂದಿನಿ ತುಪ್ಪವನ್ನೇ ಬಳಸಬೇಕು ಎಂದು ಆದೇಶಿಸಲಾಗಿದೆ ಎಂದರು.

ಇದೇ ವೇಳೆ ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರು, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ಮನವಿ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ಟಿಟಿಡಿ ದೇವಸ್ಥಾನದ ಪ್ರಸಾದ ಬಗ್ಗೆಯೂ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಅವರು ಹೇಳಿದರು.

ರಾಜ್ಯದ ಶೇ.99ರಷ್ಟು ದೇವಾಲಯಗಳು ನಂದಿನಿ ತುಪ್ಪವನ್ನೆ ಬಳಸಿಕೊಳ್ಳುತ್ತಿವೆ. ಜನರಿಗೆ ಸಂಶಯ ಬೇಡ ಅಂತ ನಂದಿನಿ ತುಪ್ಪ ಬಳಕೆ ಮಾಡಬೇಕು ಅಂತಾ ಆದೇಶ ಮಾಡಿದ್ದೇವೆ ಎಂದು ಅವರು ಹೇಳಿದರು.

ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದ ಲ್ಯಾಬ್ ಪರೀಕ್ಷೆ ಮಾಡಿಸಲಾಗುವುದು. ನನ್ನ ಅಭಿಪ್ರಾಯ ದೇಶದ ಎಲ್ಲಾ ದೇವಸ್ಥಾನಗಳ ಪ್ರಸಾದ ಟೆಸ್ಟ್ ಮಾಡಲಿ ಎಂದು ಕೇಂದ್ರದ ಮಂತ್ರಿಯೊಬ್ಬರು ರಾಜ್ಯದ ದೇವಸ್ಥಾನಗಳ ಪ್ರಸಾದ ಟೆಸ್ಟ್ ಮಾಡಬೇಕು ಎಂದು ಹೇಳಿಕೆಗೆ ಪ್ರತಿಕ್ರಿಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments