Sunday, November 24, 2024
Google search engine
Homeತಾಜಾ ಸುದ್ದಿ65 ಅತ್ಯಾಧುನಿಕ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

65 ಅತ್ಯಾಧುನಿಕ ಆಂಬ್ಯುಲೆನ್ಸ್ ಸೇವೆ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ.

ಬೆಂಗಳೂರಿನ ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಸೋಮವಾರ ನಡೆದ ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ” ಮಾಡಿದರು.

ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಈ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದರು.

26 ಸುಧಾರಿತ ಹಾಗೂ 39 ಬೇಸಿಕ್ ಲೈಫ್ ಸಪೋರ್ಟ್ ಅಂಬ್ಯುಲೆನ್ಸ್ ಗಳನ್ನು ಇಂದು ಜನರ ಸೇವೆಗೆ ಮುಕ್ತಗೊಳಿಸಲಾಗಿದ್ದು, ಇವುಗಳನ್ನು ರಾಜ್ಯದ ವಿವಿದ ಜಿಲ್ಲೆಗಳಿಗೆ ಕಳಿಸಲಾಗುವುದು ಎಂದು ತಿಳಿಸಿದರು.

ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕರೆ ನೀಡಿದರು.

ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷರಾದ ಎಚ್.ಎಂ.ರೇವಣ್ಣ ಸೇರಿ ಹಲವು ಮುಖಂಡರು ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments