Monday, September 23, 2024
Google search engine
Homeಕಾನೂನುರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರಿಗೆ ಜಾಮೀನು ಮಂಜೂರು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮೂವರಿಗೆ ಜಾಮೀನು ಮಂಜೂರು

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ರೇಣುಕಾಸ್ವಾಮಿ ಕೊಲೆ ಮಾಡಿದ್ದಾಗಿ ಪೊಲೀಸರಿಗೆ ಶರಣಾಗಿದ್ದ ಮೂವರು ಆರೋಪಿಗಳಿಗೆ ಕೊಲೆ ಪ್ರಕರಣದಲ್ಲಿ ನೇರ ಭಾಗಿಯಾಗಿಲ್ಲ ಎಂಬ ಕಾರಣಕ್ಕಾಗಿ ಸೋಮವಾರ ಜಾಮೀನು ಮಂಜೂರು ಮಾಡಲಾಗಿದೆ.

ಕಾರ್ತಿಕ್ ಅಲಿಯಾಸ್ ಕಪ್ಪೆ, ಕೇಶವಮೂರ್ತಿ ಹಾಗೂ ಅಖಿಲ್ ನಾಯ್ಕ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ. ಇದೇ ವೇಳೆ ಪ್ರಕರಣದಲ್ಲಿ ಹಣಕ್ಕಾಗಿ ಕೊಲೆ ಮಾಡಿದ್ದಾಗಿ ಹೇಳಿ ಪೊಲೀಸರಿಗೆ ಶರಣಾಗಿದ್ದ ಮೂವರಿಗೆ ಜಾಮೀನು ಲಭಿಸಿದೆ.

ಜಾಮೀನು ವಿಚಾರಣೆ ಮುಂದೂಡಿಕೆ ಬೆನ್ನಲ್ಲೇ ದರ್ಶನ್ ಅವರನ್ನು ಬಳ್ಳಾರಿ ಜೈಲಿನಲ್ಲಿ ಪತ್ನಿ ವಿಜಯಲಕ್ಷ್ಮೀ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ಜೈಲಿನಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಹೇಳಿಕೊಂಡಿದ್ದು, ಈ ವಿಷಯವನ್ನು ವಕೀಲರ ಜೊತೆ ಚರ್ಚಿಸುವಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments